Advertisement

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಸಿನಿಮಾ ರಿಲೀಸ್ ದಿನಾಂಕ ಫಿಕ್ಸ್!

09:57 AM Mar 14, 2020 | Nagendra Trasi |

ಬೆಂಗಳೂರು: ಕೆಜಿಎಫ್ ಸಿನಿಮಾ ಮೊದಲ ಭಾಗ ತೆರೆ ಕಂಡು ಒಂದೂವರೆ ವರ್ಷವಾಗಿದ್ದು, ಏತನ್ಮಧ್ಯೆ ಕೆಜಿಎಫ್ 2 ಸಿನಿಮಾ ಬಿಡುಗಡೆ ದಿನಾಂಕವನ್ನು ಹೊಂಬಾಳೆ ಫಿಲ್ಮ್ಸ್ ಘೋಷಿಸಿದೆ.

Advertisement

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಸಿನಿಮಾ ಅಕ್ಟೋಬರ್ 23ರಂದು ವಿಶ್ವಾದ್ಯಂತ ತೆರೆ ಕಾಣಲಿದೆ ಎಂದು ಹೊಂಬಾಳೆ ಫಿಲ್ಮ್ಸ್ ಟ್ವೀಟರ್ ನಲ್ಲಿ ಖಚಿತಪಡಿಸಿದೆ.

2018ರ ಡಿಸೆಂಬರ್ 21ರಂದು ಕೆಜಿಎಫ್ ಚಾಪ್ಟರ್ 1 ದೇಶ, ವಿದೇಶಗಳಲ್ಲಿ ಐದು ಭಾಷೆಗಳಲ್ಲಿ ತೆರೆಕಾಣುವ ಮೂಲಕ ಭರ್ಜರಿ ಯಶಸ್ಸು ಪಡೆದಿತ್ತು. ಇದೀಗ ಕೆಜಿಎಫ್ ಚಾಪ್ಟರ್ 2 ಸಿನಿಮಾ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿದೆ.

ಬಾಲಿವುಡ್ ನಟ ಸಂಜಯ್ ದತ್ ಹುಟ್ಟು ಹಬ್ಬದಂದು ಚಿತ್ರತಂಡ ಅಧೀರನ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ದತ್ ಗೆ ವಿಶೇಷ ಉಡುಗೊರೆ ನೀಡಿತ್ತು. ಕೆಜಿಎಫ್ 2 ಸಿನಿಮಾ ಬಿಡುಗಡೆ ಯಾವಾಗ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next