Advertisement

ಕೆ.ಜಿ.ಎಫ್- 2 ಶೂಟಿಂಗ್ ಗೆ ತಡೆಯಾಜ್ಞೆ ನೀಡಿದ ಕೋರ್ಟ್; ಏನಿದು ಪ್ರಕರಣ?

09:54 AM Aug 28, 2019 | Hari Prasad |

ಕೋಲಾರ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮತ್ತು ಪ್ರಶಾಂತ್ ನೀಲ್ ನಿರ್ದೇಶನದ ಕೆ.ಜಿ.ಎಫ್. ಚಾಪ್ಟರ್ 2 ಚಿತ್ರೀಕರಣಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಕೋಲಾರ ಜಿಲ್ಲೆಯ ಕೆ.ಜಿ.ಎಫ್. ಸಿವಿಲ್ ಕೋರ್ಟ್ ಈ ತಡೆಯಾಜ್ಞೆಯನ್ನು ನೀಡಿದೆ.

Advertisement

ಕೋಲಾರದ ಸೈನಡ್ ಗುಡ್ಡದಲ್ಲಿ ಚಾಪ್ಟರ್ 2 ಚಿತ್ರೀಕರಣಕ್ಕೆ ದುಬಾರಿ ಸೆಟ್ ಹಾಕಲಾಗಿದ್ದು ಇದರಿಂದ ಮರಗಿಡಗಳಿಗೆ ಮತ್ತು ಪರಿಸರಕ್ಕೆ ಹಾನಿಯಾಗಿದೆ ಹಾಗೂ ಚಿತ್ರೀಕರಣದಿಂದಾಗಿ ಈ ಭಾಗದ ಜನರಿಗೆ ತೊಂದರೆಯಾಗುತ್ತಿದೆ ಎಂದು ಶ್ರೀನಿವಾಸ್ ಎಂಬುವವರ ದೂರಿನ ಮೆಲಿನ ಅರ್ಜಿಯನ್ನು ವಿಚಾರಣೆ ನಡೆಸಿದ ಸ್ಥಳೀಯ ನ್ಯಾಯಾಲಯವು ಚಿತ್ರದ ಚಿತ್ರೀಕರಣಕ್ಕೆ ತಡೆಯಾಜ್ಞೆ ನೀಡಿದೆ.

ಹೊಂಬಾಳೆ ಫಿಲಂಸ್ ಬ್ಯಾನರ್ ನಡಿಯಲ್ಲಿ ವಿಜಯ ಕಿರಗುಂದೂರು ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಕೆಜಿಎಫ್ ಚಾಪ್ಟರ್ -2 ರಲ್ಲಿ ಸಂಜಯ್ ದತ್ ಸಹಿತ ಘಟಾನು ಘಟಿ ನಟರ ದಂಡೇ ಇದೆ.

Advertisement

Udayavani is now on Telegram. Click here to join our channel and stay updated with the latest news.