Advertisement

ಖಲಿಸ್ಥಾನ್ ಕಮಾಂಡೋ ಫೋರ್ಸ್ ಮುಖ್ಯಸ್ಥ ಪರಮ್‌ಜಿತ್ ಸಿಂಗ್ ಹತ್ಯೆ: ಮೂಲಗಳು

08:16 PM May 06, 2023 | Team Udayavani |

ಲಾಹೋರ್ : ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಖಲಿಸ್ಥಾನ್ ಕಮಾಂಡೋ ಫೋರ್ಸ್ (ಕೆಸಿಎಫ್-ಪಂಜ್ವಾರ್ ಗುಂಪು) ಮುಖ್ಯಸ್ಥ ಪರಮ್‌ಜಿತ್ ಸಿಂಗ್ ಪಂಜ್ವಾರ್ ನನ್ನು ಪಾಕಿಸ್ಥಾನದ ಲಾಹೋರ್‌ನಲ್ಲಿ ಶನಿವಾರ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

ಲಾಹೋರ್‌ನಲ್ಲಿರುವ ಆತನ ನಿವಾಸದ ಬಳಿ ಮೋಟಾರ್‌ಸೈಕಲ್‌ನಲ್ಲಿ ಬಂದ ಇಬ್ಬರು ಬೆಳಗ್ಗೆ ಗುಂಡಿಕ್ಕಿ ಕೊಂದಿದ್ದಾರೆ. ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯ ಪಂಜ್ವಾರ್ ಮೂಲದ 63 ವರ್ಷದ ಪರಮ್‌ಜಿತ್ ಸಿಂಗ್ ಮಾದಕ ದ್ರವ್ಯ ಮತ್ತು ಶಸ್ತ್ರಾಸ್ತ್ರಗಳ ಕಳ್ಳಸಾಗಣೆಯಲ್ಲಿ ತೊಡಗಿದ್ದ ಮತ್ತು ಜುಲೈ 2020 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಭಯೋತ್ಪಾದಕ ಎಂದು ಹೆಸರಿಸಲಾಗಿತ್ತು.

ಆತ 1986 ರಲ್ಲಿ KCF ಗೆ ಸೇರಿದ್ದ, ನಂತರ ಮುಖ್ಯಸ್ಥರಾಗಿ ಪಾಕಿಸ್ಥಾನಕ್ಕೆ ಪಲಾಯಾನವಾಗಿದ್ದ. ಕೆಸಿಎಫ್ ಅನ್ನು ಯುಎಪಿಎ ಅಡಿಯಲ್ಲಿ ಭಯೋತ್ಪಾದಕ ಸಂಘಟನೆ ಎಂದು ಪಟ್ಟಿ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next