Advertisement

ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಖಲಿಸ್ಥಾನಿ ನಾಯಕ ಅಮೃತ್ ಪಾಲ್ ಸಿಂಗ್

08:03 AM Apr 23, 2023 | Team Udayavani |

ಚಂಡೀಗಢ: ಒಂದು ತಿಂಗಳ ಹುಡುಕಾಟದ ಬಳಿಕ ಕೊನೆಗೂ ಪಂಜಾಬ್ ಪೊಲೀಸರು ಖಲಿಸ್ಥಾನಿ ನಾಯಕ ಅಮೃತ್ ಪಾಲ್ ಸಿಂಗ್ ನನ್ನು ಬಂಧಿಸಿದ್ದಾರೆ. ಪಂಜಾಬ್ ನ ಮೋಗಾದಲ್ಲಿ ಅಮೃತ್ ಪಾಲ್ ನನ್ನು ವಶಕ್ಕೆ ಪಡೆಯಲಾಗಿದೆ.

Advertisement

ವಾರಿಸ್ ಪಂಜಾಬ್ ದೆ ಸಂಘಟನೆ ಮುಖ್ಯಸ್ಥ ಅಮೃತ್ ಪಾಲ್ ಸಿಂಗ್ ಕಳೆದೊಂದು ತಿಂಗಳಿನಿಂದ ಪೊಲೀಸರ ಕಣ್ಣು ತಪ್ಪಿಸಿ ಓಡಾಡಿಕೊಂಡಿದ್ದ.

ಮಾರ್ಚ್ 18ರಂದು ಪೊಲೀಸರು ಅಮೃತ್ ಪಾಲ್ ಸಿಂಗ್ ನನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಖಲಿಸ್ತಾನ್ ಸಹಾನುಭೂತಿಯು ಜಲಂಧರ್ ಜಿಲ್ಲೆಯಲ್ಲಿ ಪೊಲೀಸರ ಬಲೆಯಿಂದ ತಪ್ಪಿಸಿಕೊಂಡು, ವಾಹನಗಳನ್ನು ಬದಲಿಸಿ ಸಿನಿಮೀಯ ರೂಪದಲ್ಲಿ ಅಮೃತ್ ಪಾಲ್ ಎಸ್ಕೇಪ್ ಆಗಿದ್ದ.

ಅಮೃತ್ ಪಾಲ್ ಸಿಂಗ್ ನ ಪತ್ನಿ ಕಿರಣ್‌ ದೀಪ್ ಕೌರ್ ಅವರು ಗುರುವಾರ (ಏಪ್ರಿಲ್ 20) ಲಂಡನ್‌ ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಅಮೃತಸರದ ಶ್ರೀ ಗುರು ರಾಮ್ ದಾಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಡೆದು ಪ್ರಶ್ನೆ ಮಾಡಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next