Advertisement

G20; ಕಾಶ್ಮೀರಿ ಮುಸ್ಲಿಮರು ಶೃಂಗಸಭೆಯನ್ನು ಅಡ್ಡಿಪಡಿಸಿ: ಖಲಿಸ್ತಾನಿ ಪ್ರತ್ಯೇಕತಾವಾದಿ

12:09 AM Sep 04, 2023 | Team Udayavani |

ಹೊಸದಿಲ್ಲಿ: ಖಲಿಸ್ತಾನಿ ಪ್ರತ್ಯೇಕತಾವಾದಿ ಮತ್ತು ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ ಗುರುಪತ್‌ವಂತ್ ಸಿಂಗ್ ಪನ್ನುನ್, ಕಣಿವೆಯಲ್ಲಿ ನೆಲೆಸಿರುವ ಕಾಶ್ಮೀರಿ ಮುಸ್ಲಿಮರು ದೆಹಲಿಗೆ ಹೋಗಿ ಜಿ20 ಶೃಂಗಸಭೆಗೆ ಅಡ್ಡಿಪಡಿಸುವಂತೆ ಆಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾನೆ. ಎರಡು ದಿನಗಳ ಶೃಂಗಸಭೆಯು ನವದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿದೆ.

Advertisement

ಶುಕ್ರವಾರದ ಪ್ರಾರ್ಥನೆಯ ನಂತರ ಶೃಂಗಸಭೆ ನಡೆಯುವ ಪ್ರಗತಿ ಮೈದಾನಕ್ಕೆ ಮೆರವಣಿಗೆ ನಡೆಸುವಂತೆ ಪನ್ನುನ್ ಜನರನ್ನು ಕೇಳಿಕೊಂಡಿದ್ದಾನೆ ಅಲ್ಲದೆ ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಖಲಿಸ್ತಾನಿ ಧ್ವಜ ಹಾರಿಸುವುದಾಗಿ ಬೆದರಿಕೆ ಹಾಕಿದ್ದಾನೆ.

ದೆಹಲಿಯಾದ್ಯಂತ ಹಲವಾರು ಮೆಟ್ರೋ ನಿಲ್ದಾಣಗಳನ್ನು ಖಲಿಸ್ತಾನ್ ಪರ ಗೀಚುಬರಹದಿಂದ ವಿರೂಪಗೊಳಿಸಿದ ಕೆಲವೇ ದಿನಗಳಲ್ಲಿ ಈ ಕರೆ ಬಂದಿದೆ. ಭಾರತ ವಿರೋಧಿ ಘೋಷಣೆಗಳ ಮೇಲೆ SFJಗೆ ಸಂಬಂಧಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಗುರುಪತ್ವಂತ್ ಸಿಂಗ್ ಪನ್ನು ಅವರ ಆದೇಶದ ಮೇರೆಗೆ ಈ ಘೋಷಣೆಗಳನ್ನು ಬರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಂಜಾಬಿ ಬಾಗ್, ಶಿವಾಜಿ ಪಾರ್ಕ್, ಮಾದಿಪುರ್, ಪಶ್ಚಿಮ ವಿಹಾರ್, ಉದ್ಯೋಗ್ ನಗರ, ಮಹಾರಾಜ ಸೂರಜ್ಮಲ್ ಸ್ಟೇಡಿಯಂ ಮತ್ತು ನಂಗ್ಲೋಯ್ ಸೇರಿದಂತೆ ಮೆಟ್ರೋ ನಿಲ್ದಾಣಗಳ ಗೋಡೆಗಳ ಮೇಲೆ ‘ದೆಹಲಿ ಬನೇಗಾ ಖಲಿಸ್ತಾನ್’ ಮತ್ತು ‘ಖಾಲಿಸ್ತಾನ್ ರೆಫರೆಂಡಮ್ ಜಿಂದಾಬಾದ್’ ಎಂಬ ಘೋಷಣೆಗಳನ್ನು ಪಶ್ಚಿಮ ದೆಹಲಿಯಲ್ಲಿ. ಕಪ್ಪು ಬಣ್ಣದ ಮಸಿಯಲ್ಲಿ ಬರೆದಿರುವುದು ಕಂಡುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next