ಅಹ್ಮದಾಬಾದ್: ಅಹ್ಮದಾಬಾದ್‌ನಲ್ಲಿ ಭಾನುವಾರ ನಡೆಯಲಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯವನ್ನು ನಿಲ್ಲಿಸುವುದಾಗಿ ಖಲಿಸ್ತಾನಿ ಭಯೋತ್ಪಾದಕ ಗುರುಪತ್‌ವಂತ್ ಸಿಂಗ್ ಪನ್ನುನ್ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ.
ವೀಡಿಯೊದಲ್ಲಿ, ನಿಷೇಧಿತ ಖಾಲಿಸ್ತಾನಿ ಸಂಘಟನೆಯ ಸಂಸ್ಥಾಪಕ ‘ಸಿಖ್ಸ್ ಫಾರ್ ಜಸ್ಟೀಸ್’ 1984 ರ ಸಿಖ್ ವಿರೋಧಿ ದಂಗೆ ಮತ್ತು 2002 ರ ಗುಜರಾತ್ ಗಲಭೆಗಳ ಬಗ್ಗೆ ಪ್ರಸ್ತಾಪಿಸಿರುವುದು ಕಾಣಬಹುದಾಗಿದೆ, ಅಲ್ಲದೆ ಇಸ್ರೇಲ್-ಹಮಾಸ್ ಯುದ್ಧದ ಬಗ್ಗೆ ಭಾರತದ ದೃಷ್ಟಿಕೋನವನ್ನೂ ಅವರು ಪ್ರಶ್ನಿಸಿದ್ದಾರೆ.
ಗುರುಪತ್ವಂತ್ ಸಿಂಗ್ ಅಮೆರಿಕ ಮೂಲದ ನಿಷೇಧಿತ ಸಂಘಟನೆ ಸಿಕ್ ಫಾರ್ ಜಸ್ಟಿಸ್ ನ ನಾಯಕ. ಆತ ಭಾರತದ ವಿರುದ್ಧ ಎಚ್ಚರಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಚ್ಚರಿಕೆ ನೀಡಿರುವ ವಿಡಿಯೋವನ್ನೂ ಬಿಡುಗಡೆ ಮಾಡಿದ್ದ. ಇಸ್ರೇಲ್-ಹಮಾಸ್ ಯುದ್ಧದಿಂದ ಪಾಠ ಕಲಿಯಬೇಕು ಎಂದು ಹೇಳಿದ್ದ. ಇದೇ ರೀತಿಯ ಯುದ್ಧವನ್ನು ಭಾರತದಲ್ಲಿಯೂ ಪ್ರಾರಂಭಿಸುವುದಾಗಿ ಬೆದರಿಕೆ ಹಾಕಿದ್ದ.
ಸೆಪ್ಟೆಂಬರ್‌ನಲ್ಲಿ ನಡೆದ ಭಾರತ-ಪಾಕ್ ಪಂದ್ಯದ ವೇಳೆಯೂ ಪನ್ನು ಬೆದರಿಕೆ ಹಾಕಿದ್ದ. ಉಭಯ ದೇಶಗಳ ನಡುವೆ ದ್ವೇಷವನ್ನು ಹುಟ್ಟುಹಾಕಿದ ಆರೋಪದ ಮೇಲೆ ಪನ್ನುನ್ ವಿರುದ್ಧ ಪ್ರಕರಣವೂ ದಾಖಲಾಗಿದೆ.
ಕ್ರಿಕೆಟ್ ವಿಶ್ವಕಪ್‌ನ ಅಂತಿಮ ಪಂದ್ಯ ಭಾನುವಾರ ಅಹಮದಾಬಾದ್‌ನಲ್ಲಿ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಉಪಪ್ರಧಾನಿ ರಿಚರ್ಡ್ ಮಾರ್ಲ್ಸ್ ಕೂಡ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: World Cup Final; ಪರಮ ದುಬಾರಿಯಾಗಿದೆ ಅಹಮದಾಬಾದ್ ನಗರ: ಒಂದು ಹೋಟೆಲ್ ರೂಮ್’ಗೆ 2 ಲಕ್ಷ ರೂ