Advertisement

“ಖಂಡ್ರೆಗೆ 40 ಸಾವಿರ ಲೀಡ್‌ ಕೊಡಿಸದಿದ್ದರೆ ರಾಜೀನಾಮೆ’

11:25 PM Apr 19, 2019 | Lakshmi GovindaRaju |

ಬೀದರ: “ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ನಡೆಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ಬೀದರ ವಿಧಾನ ಸಭಾ ಕ್ಷೇತ್ರದಲ್ಲಿ ಕನಿಷ್ಠ 40 ಸಾವಿರ ಲೀಡ್‌ ಕೊಡಿಸುತ್ತೇನೆ.

Advertisement

ಇಲ್ಲವಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಕ್ರೀಡಾ ಸಚಿವ ರಹೀಂ ಖಾನ್‌ ಹೇಳಿದರು. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಈಶ್ವರ ಖಂಡ್ರೆ ಗೆಲುವು ಖಚಿತ.

ಅವರ ಗೆಲುವಿನ ಬಗ್ಗೆ ಯಾರಿಗೂ ಸಂಶಯಬೇಡ. ನನ್ನ ವಿಧಾನ ಸಭಾ ಕ್ಷೇತ್ರದಲ್ಲಿ 40 ಸಾವಿರ ಮತಗಳ ಲೀಡ್‌ ನೀಡುತ್ತೇನೆ. ಲೀಡ್‌ ಸಿಗದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲೂ ನಾನು ಸಿದ್ಧ’ ಎಂದು ಸವಾಲು ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next