Advertisement

Congress: ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಖರ್ಗೆ

09:51 PM Oct 27, 2023 | Team Udayavani |

ನವದೆಹಲಿ: ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ನಡೆದ ಪಕ್ಷದ ಆಂತರಿಕ ಚುನಾವಣೆಯಲ್ಲಿ ಶಶಿ ತರೂರ್‌ ಅವರನ್ನು ಸೋಲಿಸಿ, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಅಧ್ಯಕ್ಷರಾದರು. 2022ರ ಅ.26ರಂದು ಅಧಿಕೃತವಾಗಿ ಅವರು ಅಧಿಕಾರ ವಹಿಸಿಕೊಂಡರು. “ಖರ್ಗೆ ಅವರ ನಾಯಕತ್ವದಲ್ಲಿ ಪಕ್ಷವು ಗಮನಾರ್ಹವಾದ ಪ್ರಗತಿಯನ್ನು ಕಂಡಿದೆ.

Advertisement

ಪಕ್ಷದ ಸಾಂಸ್ಥಿಕ ರಚನೆಯನ್ನು ಪುನರುಜ್ಜೀವಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಜನರ ಒಳಿತಿಗಾಗಿ ಬದ್ಧರಾಗಿದ್ದಾರೆ. ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ, ಜಾತ್ಯತೀತತೆ, ಅಂತರಿಕ ಬೆಳವಣಿಗೆ ಹಾಗೂ ದೇಶಭಕ್ತಿಯ ಸದ್ಗುಣಗಳು ಅವರಲ್ಲಿವೆ’ ಎಂದು ಕಾಂಗ್ರೆಸ್‌ ಟ್ವೀಟ್‌(ಎಕ್ಸ್‌) ಮಾಡಿದೆ. ಇದೇ ವೇಳೆ ಕಾಂಗ್ರೆಸ್‌ ನಾಯಕರಾದ ಶಶಿ ತರೂರ್‌, ಪವನ್‌ ಖೇರಾ, ಸುಪ್ರಿಯಾ ಶ್ರೀನಾಥೆ, ಅಭಿಷೇಕ್‌ ಸಿಂಘ್ವಿ, ಮನೀಶ್‌ ತಿವಾರಿ ಸೇರಿದಂತೆ ಪ್ರಮುಖರು ಖರ್ಗೆ ಅವರನ್ನು ಅಭಿನಂದಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next