Advertisement

ಖರ್ಗೆ ಅಧ್ಯಕ್ಷರಾಗುವ ಬಗ್ಗೆ ಗೊತ್ತಿಲ್ಲ: ಪರಮೇಶ್ವರ್‌

10:07 AM May 11, 2017 | Team Udayavani |

ಬೆಂಗಳೂರು: ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಕೆಪಿಸಿಸಿ ಅಧ್ಯಕ್ಷರಾಗುತ್ತಾರೆ ಎಂಬ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತಾರೆ. ಕೆಪಿಸಿಸಿ ಅಧ್ಯಕ್ಷರಾಗುತ್ತಾರೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಬರುತ್ತಿದೆ. ಪರಮೇಶ್ವರ್‌ ಮುಂದುವರೆಯುತ್ತಾರೆ ಅಂತಾನೂ ಸುದ್ದಿ ಬರುತ್ತಿದೆ. ಎಲ್ಲವನ್ನೂ ಹೈ ಕಮಾಂಡ್‌ ನಿರ್ಧರಿಸುವುದರಿಂದ ಈ ಬಗ್ಗೆ ತಮಗೇನು ಗೊತ್ತಿಲ್ಲ ಎಂದು ಅವರು ಹೇಳಿದರು.

ರಾಜ್ಯ ಕಾಂಗ್ರೆಸ್‌ನ ನೂತನ ಉಸ್ತುವಾರಿ ವೇಣುಗೋಪಾಲ್‌ ಅವರು ಎಲ್ಲರ ಅಭಿಪ್ರಾಯ ಸಂಗ್ರಹಿಸಿದ್ದಾರೆ. 2108 ರ ಚುನಾವಣೆಗೆ ಪಕ್ಷವನ್ನು ಹೇಗೆ ಸಂಘಟಿಸಬೇಕು ಎಂಬ ಸಲಹೆ ನೀಡಿದ್ದಾರೆ. ಪಕ್ಷದ ವಕ್ತಾರರು ಹೇಗೆ ಕೆಲಸ ಮಾಡಬೇಕೆಂಬ ಕುರಿತಂತೆಯೂ ಅವರು ಹೇಳಿದ್ದಾರೆ. ಅದರಂತೆ ನಾವು ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next