ಹೊಸದಿಲ್ಲಿ: ಲೋಕಸಭಾ ಚುನಾವಣೆಗಾಗಿ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, ಮಲ್ಲಿಕಾರ್ಜುನ ಖರ್ಗೆ, ಜ್ಯೋತಿರಾದಿತ್ಯ ಸಿಂಧ್ಯಾ, ಗುಲಾಂ ನಬಿ ಆಜಾದ್, ರಾಜಸ್ಥಾನ ಸಿಎಂ ಅಶೋಕ್ ಗೆಹೊÉàಟ್, ಪಂಜಾಬ್ ಸಿಎಂ ಕ್ಯಾ| ಅಮರಿಂದರ್ ಸಿಂಗ್, ಮಧ್ಯಪ್ರದೇಶ ಸಿಎಂ ಕಮಲ್ ನಾಥ್, ಭೂಪೇಂದ್ರ ಸಿಂಗ್ ಹೂಡಾ, ರಾಜಸ್ಥಾನ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ಪಂಜಾಬ್ ಸಚಿವ-ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು, ಮಾಜಿ ಕ್ರಿಕೆಟಿಗ ಅಜರುದ್ದೀನ್, ಹಾರ್ದಿಕ್ ಪಟೇಲ್, ಬಿಹಾರದ ಮಾಜಿ ಡಿಸಿಎಂ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ದೀಪೇಂದ್ರ ಸಿಂಗ್ ಹೂಡಾ ಇದ್ದಾರೆ.
ರಾಹುಲ್ ವಿರುದ್ಧ ತ್ರಿಪುರದಲ್ಲಿ ಬಿಜೆಪಿ ಕೇಸ್
ಅಗರ್ತಲಾ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರನ್ನು “ಕೊಲೆ ಆರೋಪಿ’ ಎಂದು ಕರೆದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತ್ರಿಪುರದ ಮುಖ್ಯ ಚುನಾವಣ ಅಧಿಕಾರಿಗೆ ಬಿಜೆಪಿ ನಾಯಕರೊಬ್ಬರು ದೂರು ನೀಡಿದ್ದಾರೆ.