Advertisement
2004ರಲ್ಲಿ ಎಸ್.ಎಂ. ಕೃಷ್ಣ ಮಂಡ್ಯದ ಮದ್ದೂರು ಕ್ಷೇತ್ರ ಬಿಟ್ಟು ಬೆಂಗಳೂರಿನ ಚಾಮರಾಜ ಪೇಟೆ ಕ್ಷೇತ್ರದಿಂದ ಸ್ಪರ್ಧೆಮಾಡಿದ್ದು, ಒಕ್ಕಲಿಗ ಸಮುದಾಯ ಜೆಡಿಎಸ್ ಪರ ಒಗ್ಗೂಡಲು ಅನುಕೂಲವಾಗಿತ್ತು. ಈಗ ಸಿದ್ದರಾಮಯ್ಯ ಉತ್ತರ ಕರ್ನಾಟಕ ಭಾಗದಲ್ಲಿ ಸ್ಪರ್ಧೆಗೆ ಮುಂದಾಗಿರುವುದರಿಂದ ಹಳೇ ಮೈಸೂರು ಭಾಗದಲ್ಲಿ ಪಕ್ಷಕ್ಕೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನೂ ಮಿಸ್ತ್ರಿ ಅವರಿಗೆ ನೀಡಿದ್ದಾರೆಂದು ತಿಳಿದು ಬಂದಿದೆ