Advertisement
ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ನಾಯಕರು ಕೂಡ ಹೀರಾಬೆನ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
Related Articles
Advertisement
ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ನಾಯ್ಡು ಅವರು, “ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಜಿ ಅವರ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ತೀವ್ರ ಕಳವಳಗೊಂಡಿದ್ದೇನೆ. ಅವರ ಶೀಘ್ರ ಚೇತರಿಕೆ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.ಎಂದಿದ್ದಾರೆ.
99 ವರ್ಷದ ಹೀರಾಬೆನ್ ಅವರನ್ನು ಕೆಲವು ಆರೋಗ್ಯ ಸಮಸ್ಯೆಗಳಿಂದ ಅಹಮದಾಬಾದ್‌ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಭೇಟಿ ಮಾಡಲು ಮೋದಿ ಮಧ್ಯಾಹ್ನ ಆಸ್ಪತ್ರೆಗೆ ಭೇಟಿ ನೀಡಿದರು. ಅಹಮದಾಬಾದ್ ತಲುಪಿದ ನಂತರ ಅವರು ಆಸ್ಪತ್ರೆಗೆ ತೆರಳಿದರು ಮತ್ತು ಒಂದು ಗಂಟೆಗೂ ಹೆಚ್ಚು ಕಾಲ ಅಲ್ಲಿಯೇ ಇದ್ದರು.ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಹೀರಾಬೆನ್ ಅವರ ಆರೋಗ್ಯ ವಿಚಾರಿಸಿದ್ದಾರೆ.
ಬಿಜೆಪಿ ಸಂಸದ ಜುಗಲ್ಜಿ ಠಾಕೂರ್ ಅವರು ಹೀರಾಬೆನ್ ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಅವರು ಒಂದು ಅಥವಾ ಎರಡು ದಿನಗಳಲ್ಲಿ ಡಿಸ್ಚಾರ್ಜ್ ಆಗಬಹುದು ಎಂದು ಹೇಳಿದ್ದಾರೆ.