Advertisement

Politics: ಭೋಜನ, ಫೋಟೋ ಸೆಷನ್‌ಗೆ ಸೀಮಿತವಾದ ಖರ್ಗೆ ನಿವಾಸ

10:58 PM Feb 07, 2024 | Team Udayavani |

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದಿಲ್ಲಿ ನಿವಾಸ ಬುಧವಾರ ರಾಜ್ಯದ ಕಾಂಗ್ರೆಸ್‌ ನಾಯಕರಿಗೆ ಭೋಜನ ಹಾಗೂ ಫೋಟೋ ಸೆಷನ್‌ಗಷ್ಟೇ ಸೀಮಿತವಾಯಿತು. ಪ್ರತಿಭಟನೆ ಹಿನ್ನೆಲೆಯಲ್ಲಿ ದಿಲ್ಲಿಗೆ ತೆರಳಿದ್ದ ಕೈಪಡೆಗೆ ಖರ್ಗೆ ಅವರು ಅಚ್ಚುಕಟ್ಟಾದ ಆತಿಥ್ಯ ನೀಡಿದ್ದಾರೆ.

Advertisement

ಕೇಂದ್ರ ಸರಕಾರದಿಂದ ತೆರಿಗೆ ಪಾಲು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ದಿಲ್ಲಿಯ ಜಂತರ್‌ ಮಂತರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಬಳಿಕ ಖರ್ಗೆ ನಿವಾಸದಲ್ಲಿ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ರಾಜ್ಯದ ಸಚಿವರು, ಕಾಂಗ್ರೆಸ್‌ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರು ಪಾಲ್ಗೊಂಡಿದ್ದರು.

ಆದರೆ, ಈ ಸಂದರ್ಭವನ್ನು ಬಳಸಿಕೊಂಡು ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಖರ್ಗೆ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುಜೇìವಾಲ ಅವರ ಜತೆ ಸಿಎಂ, ಡಿಸಿಎಂ ಅವರು ಸಭೆ ನಡೆಸುವ ನಿರೀಕ್ಷೆಗಳಿದ್ದವು. ಆದರೆ ಖರ್ಗೆ ಅವರು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದಲ್ಲಿ ಭಾಗವಹಿಸಬೇಕಾಗಿದ್ದರಿಂದ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಸುತ್ತೂರು ಜಾತ್ರಾ ಕಾರ್ಯಕ್ರಮಕ್ಕೆ ಬರಬೇಕಾಗಿದ್ದರಿಂದ ಯಾವುದೇ ರೀತಿಯ ಸಭೆಗಳು ನಡೆಯಲಿಲ್ಲ. ಬದಲಿಗೆ ಅದೊಂದು ರೀತಿ ಭೋಜನ ಹಾಗೂ ಫೋಟೋ ಸೆಷನ್‌ಗೆ ಸೀಮಿತವಾಯಿತು ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next