Advertisement
“ಒಂದು ಜಿಲ್ಲೆ ಒಂದು ಕ್ರೀಡೆ’ ಎಂಬ ಪರಿಕಲ್ಪನೆಯಡಿ ಕ್ರೀಡೆ ಹಾಗೂ ಗ್ರಾಮೀಣ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಮಂಗಳೂರಿನ ಮಂಗಳಾ ಕ್ರೀಡಾಂಗಣ ಹಾಗೂ ಉಡುಪಿ ಜಿಲ್ಲೆಯ ಅಜ್ಜರಕಾಡಿನಲ್ಲಿ ಕೇಂದ್ರ ಸ್ಥಾಪಿಸಲಾಗಿದೆ. ಕ್ರೀಡಾಪಟುಗಳ ಆಯ್ಕೆ ಮತ್ತು ಗುಣಮಟ್ಟದ ತರಬೇತಿ ನೀಡುವುದು ಈ ಕೇಂದ್ರದ ಹೊಣೆಗಾರಿಕೆ. ಮಾಜಿ ಚಾಂಪಿಯನ್‌ಗಳು, ಅರ್ಹತೆ ಪಡೆದ ತರಬೇತುದಾರರು ಇದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Related Articles
ಜಿಲ್ಲೆಯ ವಿವಿಧೆಡೆಯ 12 ರಿಂದ 18 ವರ್ಷದೊಳಗಿನ 30 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ದ.ಕ. ಜಿಲ್ಲೆಯಲ್ಲಿ ತಲಾ 15 ಮಂದಿ ವಿದ್ಯಾರ್ಥಿ/ವಿದ್ಯಾರ್ಥಿನಿಯರು, ಉಡುಪಿ ಜಿಲ್ಲೆಯಲ್ಲಿ 18 ವಿದ್ಯಾರ್ಥಿ/12 ವಿದ್ಯಾರ್ಥಿನಿಯರಿದ್ದಾರೆ. ಶಾಲಾ, ಕಾಲೇಜು ಮಟ್ಟದ ಸ್ಪರ್ಧೆಗಳಲ್ಲಿ ವಿಜೇತ ಆ್ಯತ್ಲೆಟಿಕ್ ಕ್ರೀಡಾಪಟುಗಳಿಗೆ ಆದ್ಯತೆ ನೀಡಲಾಗಿದೆ. ಈ ವಿದ್ಯಾರ್ಥಿಗಳು ನಾಲ್ಕು ವರ್ಷಗಳವರೆಗೆ ತರಬೇತಿ ಪಡೆಯುವರು.
Advertisement
ಏನಿದು ತರಬೇತಿ ಕೇಂದ್ರ?ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳು ಬೆಳಕಿಗೆ ತರುವುದು, ಮಧ್ಯ ಪ್ರದೇಶದಲ್ಲಿ ನಡೆಯುವ ಖೇಲೋ ಇಂಡಿಯಾ ಯೂತ್ ಗೇಮ್ಸ್ ನಲ್ಲಿ ಈ ವಿದ್ಯಾರ್ಥಿಗಳು ಪದಕ ಪಡೆಯುವುದು, ರಾಷ್ಟ್ರ, ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲೂ ಪಾಲ್ಗೊಳ್ಳಲು ಪ್ರೋತ್ಸಾಹ ನೀಡಲು ಈ ತರಬೇತಿ ಕೇಂದ್ರ ಆರಂಭವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಖೇಲೋ ಇಂಡಿಯಾ ತರಬೇತಿ ಕೇಂದ್ರವನ್ನು ಕೇಂದ್ರ ಸರಕಾರ ಮಂಗಳೂರಿನ ಮಂಗಳಾ ಕ್ರೀಡಾಂಗಣ ಮತ್ತು ಉಡುಪಿಯ ಅಜ್ಜರಕಾಡಿನಲ್ಲಿ ಸ್ಥಾಪಿಸಿದೆ. ಸದ್ಯ 60 ಮಂದಿಗೆ ತರಬೇತಿ ನೀಡಲಾಗುತ್ತಿದೆ.
– ರವಿ ವೈ. ನಾಯ್ಕ್ , – ಡಾ| ರೋಶನ್ ಕುಮಾರ್ ಶೆಟ್ಟಿ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ದ.ಕ. ಜಿಲ್ಲೆ, ಉಡುಪಿ ಜಿಲ್ಲೆ -ನವೀನ್ ಭಟ್ ಇಳಂತಿಲ