Advertisement

ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ : ಪ್ರಧಾನಿ ಭಾಗಿ ಸಾಧ್ಯತೆ

06:43 PM Mar 03, 2022 | Team Udayavani |

ಬೆಂಗಳೂರು: ಬಹು ನಿರೀಕ್ಷಿತ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ಕ್ಕೆ ದಿನಗಣನೆ ಆರಂಭವಾಗಿದ್ದು, ಬಹುತೇಕ ಏಪ್ರಿಲ್ 24 ರಿಂದ ಮೇ 3 ರವೆರೆಗೆ ನಡೆಯುವ ಸಾಧ್ಯತೆ‌ ಇದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

Advertisement

ವಿಧಾನಸೌಧದಲ್ಲಿ ಗುರುವಾರ ಕ್ರೀಡಾ ಇಲಾಖೆ ಅಧಿಕಾರಿಗಳು ಹಾಗೂ ಜೈನ್ ವಿವಿ ಕುಲಪತಿಗಳೊಂದಿಗೆ ಸಚಿವ ಡಾ.ನಾರಾಯಣಗೌಡ ಅವರು ಸಭೆ ನಡೆಸಿ, ಕ್ರೀಡಾ ಕೂಟ ಆಯೋಜನೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿ, ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿದ್ದು, ಬಹುತೇಕ ಅವರು ಬರುವುದು ನಿಚ್ಚಳವಾಗಿದೆ ಎಂದು ಸಚಿವರು ತಿಳಿಸಿದರು.

23 ಗೇಮ್‌ಗಳ ಆಯೋಜನೆ

ಇದೇ ಮೊದಲ ಬಾರಿಗೆ 23 ಗೇಮ್‌ಗಳನ್ನು ಆಯೋಜಿಸುತ್ತಿದ್ದು, ರಾಷ್ಟ್ರಾದ್ಯಂತ ಸುಮಾರು 8000 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕರ್ನಾಟಕದ ಮಲ್ಲಕಂಬ, ಯೋಗ, ಕರಾಟೆ ಕ್ರೀಡೆಗಳನ್ನು ಇದೇ ಮೊದಲ ಬಾರಿಗೆ ಈ ಕ್ರೀಡಾ ಕೂಟದಲ್ಲಿ ಪರಿಚಯಿಸಲಾಗುತ್ತಿದೆ.

ಕ್ರೀಡಾ ಕೂಟದ ಲೋಗೋ, ಮಸ್ಕಟ್‌ಗೆ ಕೇಂದ್ರ ಕ್ರೀಡಾ ಮಂತ್ರಾಲಯವು ಅನುಮೋದನೆ ನೀಡಿದ್ದು, ಸದ್ಯದಲ್ಲಿಯೇ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಇದೇ ಮೊದಲ ಬಾರಿಗೆ ಅದ್ದೂರಿ ಕ್ರೀಡಾ ಕೂಟವನ್ನು ಆಯೋಜಿಸುವ ಅವಕಾಶ ಸಿಕ್ಕಿದ್ದು ಅತ್ಯುತ್ತಮವಾಗಿ ಕ್ರೀಡಾಕೂಟವನ್ನು ಸಂಘಟಿಸಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

Advertisement

ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಆಯುಕ್ತ ಗೋಪಾಲಕೃಷ್ಣ, ಜೈನ್ ವಿವಿ ಉಪಕುಲಪತಿ ಡಾ.ಚೆನ್ನರಾಜ್ ಸೇರಿದಂತೆ ಹಲವರು‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next