Advertisement
ಕರ್ನಾಟಕ ರಾಜ್ಯ ಖೋ ಖೋ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನಯ್ಯ ಸಲ್ಲಿಸಿರುವ ಅರ್ಜಿಯನ್ನು ಬುಧವಾರ ನ್ಯಾ| ಬಿ.ಎಂ. ಶ್ಯಾಮಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆಗೆ ಎತ್ತಿಕೊಂಡಿತು. ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ ಈ ಸಂಬಂಧ ಮಾಹಿತಿ ಸಲ್ಲಿಸುವಂತೆ ಸರಕಾರದ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಶುಕ್ರವಾರಕ್ಕೆ (ಜ.4) ಮುಂದೂಡಿತು.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲೆ ಡಿ. ಸಂಧ್ಯಾ, ಖೇಲೋ ಇಂಡಿಯಾ ಯುವ ಕ್ರೀಡಾಕೂಟಕ್ಕೆ ಪುರುಷರ ಹಾಗೂ ಮಹಿಳೆಯರ ತಂಡಗಳನ್ನು ಆಯ್ಕೆ ಮಾಡಿ ಕಳಿಸಿಕೊಂಡುವಂತೆ ಖೋ ಖೋ ಫೆಡರೇಷನ್ ಆಫ್ ಇಂಡಿಯಾ 2018ರ ಆ. 7ರಂದು ಕರ್ನಾಟಕ ರಾಜ್ಯ ಖೋ ಖೋ ಸಂಸ್ಥೆಗೆ ಪತ್ರ ಬರೆದಿತ್ತು. ಅದರಂತೆ ಅಕ್ಟೋಬರ್ ತಿಂಗಳಲ್ಲಿ ತಂಡಗಳನ್ನು ಆಯ್ಕೆ ಮಾಡಿ ಪಟ್ಟಿ ಕಳಿಸಿಕೊಡಲಾಗಿತ್ತು. ಈ ಮಧ್ಯೆ ನ. 20ರಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಕಾರ್ಯದರ್ಶಿಗಳನ್ನು ಕ್ರೀಡಾಕೂಟಕ್ಕೆ ನೋಡಲ್ ಅಧಿಕಾರಿಯನ್ನಾಗಿ ರಾಜ್ಯ ಸರಕಾರ ನೇಮಕ ಮಾಡಿತು. ತಂಡಗಳ ಪಟ್ಟಿಗೆ ನೋಡಲ್ ಅಧಿಕಾರಿಯ ಅನುಮೋದನೆ ಪಡೆದುಕೊಳ್ಳುವಂತೆ ಖೋ ಖೋ ಫೆಡರೇಷನ್ ಆಫ್ ಇಂಡಿಯಾ ಹೇಳಿತ್ತು. ಅದರಂತೆ, ಎರಡೂ ತಂಡಗಳ ಪಟ್ಟಿಯನ್ನು ಅನುಮೋದನೆಗಾಗಿ ನೋಡಲ್ ಅಧಿಕಾರಿಗೆ ನ. 27ರಂದು ಕಳಿಸಿಕೊಡಲಾಗಿದೆ. ಆದರೆ, ಈವರೆಗೆ ಅನುಮೋದನೆ ಕೊಟ್ಟಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
Related Articles
Advertisement