Advertisement

ಬೆಂ.ಕೇಂದ್ರದಲ್ಲಿ ಖುಷ್ಬು ಮತಯಾಚನೆ

06:40 AM Apr 11, 2019 | Lakshmi GovindaRaju |

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ಸಿ.ವಿ.ರಾಮನ್‌ನಗರದಲ್ಲಿ ಬುಧವಾರ ಕಾಂಗ್ರೆಸ್‌ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ ಪರ ನಟಿ, ಎಐಸಿಸಿ ವಕ್ತಾರೆ ಖುಷ್ಬು ಮತಯಾಚಿಸಿದರು.

Advertisement

ಹೊಯ್ಸಳ ನಗರದಲ್ಲಿ ಬುಧವಾರ ಬೆಳಗ್ಗೆ ನಡೆದ ರೋಡ್‌ ಶೋನಲ್ಲಿ ನಟಿ ಖುಷ್ಬು, ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ ಜತೆ ಸಚಿವ ಕೆ.ಜೆ.ಜಾರ್ಜ್‌, ಶಾಸಕ ಎನ್‌.ಎ.ಹ್ಯಾರಿಸ್‌ ಭಾಗವಹಿಸಿದ್ದರು. ಸಿ.ವಿ.ರಾಮನ್‌ನಗರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿ ಕಾಂಗ್ರೆಸ್‌ ಸದಸ್ಯರು, ಕಾರ್ಯಕರ್ತರು ಸಾಥ್‌ ನೀಡಿದರು.

ಈ ವೇಳೆ ಮಾತನಾಡಿದ ಖುಷ್ಬು, ಮುಖ್ಯವಾಗಿ ಯಾರು ಕೆಲಸ ಮಾಡುವರೋ ಅವರಿಗೆ ಮತ ಹಾಕಿ. ಪ್ರಧಾನಿ ಮೋದಿ ಬರೀ ಸುಳ್ಳು ಹೇಳಿಕೊಂಡೇ ಬಂದಿದ್ದಾರೆ. ಈ ಬಾರಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡಬೇಕು ಎಂದು ಕರೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next