Advertisement

ಮನೆಬಾಗಿಲಿಗೆ ಕೆಐಎಡಿಬಿ ಪರಿಹಾರ

01:53 AM May 11, 2020 | Team Udayavani |

ಮಂಗಳೂರು: ಹಲವು ಸಂದರ್ಭಗಳಲ್ಲಿ ಸಂತ್ರಸ್ತರು ಪರಿಹಾರಕ್ಕಾಗಿ ವರ್ಷಗಟ್ಟಲೆ ಕಚೇರಿಗಳಿಗೆ ಸುತ್ತಾಡಿ, ನ್ಯಾಯಾಲಯದ ಮೊರೆ ಹೋಗಿ ಹತ್ತಾರು ವರ್ಷ ಗಳ ವಿಳಂಬವಾಗಿ ಪರಿಹಾರ ದೊರಕುವ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿವೆ. ಆದರೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮಂಗಳೂರು ಕಚೇರಿಯು ಭೂಸ್ವಾಧೀನದಿಂದ ಜಮೀನು ಕಳೆದುಕೊಂಡ ನಿರ್ವಸಿತರಿಗೆ ಎಲ್ಲ ಪ್ರಕ್ರಿಯೆ ಮುಗಿದ ಬಳಿಕ ನೇರವಾಗಿ ಅವರ ಮನೆಬಾಗಿಲಿಗೇ ತೆರಳಿ ಪರಿಹಾರ ಮೊತ್ತವನ್ನು ನೀಡುವ ಮೂಲಕ ಈ ಪ್ರಕ್ರಿಯೆಗಳನ್ನು ತ್ವರಿತಗೊಳಿಸಿದೆ.

Advertisement

ಎಂಆರ್‌ಪಿಎಲ್‌ 4ನೇ ಹಂತದ ವಿಸ್ತರಣೆ ಯೋಜನೆಗಾಗಿ ಮಂಗಳೂರು ತಾಲೂಕಿನ ಪೆರ್ಮುದೆ, ಕುತ್ತೆತ್ತೂರು, ತೋಕೂರು ಗ್ರಾಮಗಳ 962 ಎಕರೆ ಜಮೀನನ್ನು ಕೆಐಎಡಿಬಿ ಸ್ವಾಧೀನಪಡಿಸಿದೆ. ಈ ಜಮೀನು ಭೂಸ್ವಾಧೀನ ಪ್ರಕ್ರಿಯೆ ಮುಗಿದಿದ್ದರೂ ಜನರು ಪರಿಹಾರ ಪಡೆದುಕೊಳ್ಳುವುದು ಬಾಕಿ ಇತ್ತು. ಇದಕ್ಕಾಗಿ ನಿರ್ವಸಿತರು ಬೈಕಂಪಾಡಿ ಕೆಐಎಡಿಬಿ ಕಚೇರಿಗೆ ಆಗಮಿಸಬೇಕಿತ್ತು.

ಈ ಮಧ್ಯೆ ಲಾಕ್‌ಡೌನ್‌ ಜಾರಿಯಾದ ಹಿನ್ನೆಲೆಯಲ್ಲಿ ಜನರು ಕೆಐಎಡಿಬಿ ಕಚೇರಿಗೆ ಆಗಮಿಸುವುದು ದುಸ್ತರವಾಗಿ ಒಂದೂವರೆ ತಿಂಗಳಿನಿಂದ ಈ ಪರಿಹಾರ ವಿತರಣೆ ಪ್ರಕ್ರಿಯೆ ನನೆಗುದಿಗೆ ಬಿತ್ತು. ಬಹುತೇಕ ಜಮೀನುಗಳ ದಾಖಲೆಗಳು ಕುಟುಂಬದ ಹಿರಿಯ ನಾಗರಿಕರ ಹೆಸರಿನಲ್ಲಿರುವುದರಿಂದ ಪರಿಹಾರ ಪಡೆದುಕೊಳ್ಳಲು ಖುದ್ದು ಅವರೇ ಬರಬೇಕಾಗಿತ್ತು. ಇದರಿಂದ ಪರಿಹಾರ ಪಡೆದುಕೊಳ್ಳುವುದು ದುಸ್ತರವಾಗಿತ್ತು.

ಸಂತ್ರಸ್ತರ ಈ ಕಷ್ಟ ಅರ್ಥೈಸಿಕೊಂಡ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ಬಿನೊಯ್‌ ಪಿ.ಕೆ. ಅವರು ಮನೆಯಿಂದ ಹೊರಗೆ ಬರಲು ಕಷ್ಟವಿರುವ ಹಿರಿಯ ನಾಗರಿಕರು, ಅನಾರೋಗ್ಯಪೀಡಿತ ಅರ್ಹ ಸಂತ್ರಸ್ತರ ಪಟ್ಟಿಯನ್ನು ತಯಾರಿಸಿದರು. ಅನಂತರ ಅ ಧಿಕಾರಿಗಳು ಸಿಬಂದಿ ತಂಡವೇ ಸಂತ್ರಸ್ತರ ಮನೆಗಳಿಗೆ ತೆರಳಿ, ಅಲ್ಲಿಯೇ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ, ನಿಗದಿತ ಪರಿಹಾರದ ಮೊತ್ತವನ್ನೂ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next