Advertisement

‘ವಿಕ್ರಾಂತ ರೋಣ’ ಸಿನಿಮಾ ಬಿಡುಗಡೆಯ ದಿನಾಂಕ ಘೋಷಿಸಿದ ಸುದೀಪ್

01:06 PM Apr 15, 2021 | Team Udayavani |

ಬೆಂಗಳೂರು : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ‘ವಿಕ್ರಾಂತ್ ರೋಣ’ ಸಿನಿಮಾ ಇದೇ ಆಗಸ್ಟ್​ 19 ರಂದು ಭಾರತದಾದ್ಯಂತ ಬಿಡುಗಡೆಯಾಗಲಿದೆ.

Advertisement

ಕಳೆದ ಮೂರು ದಿನಗಳ ಹಿಂದೆ ಏಪ್ರಿಲ್ 15 ರಂದು ಸರ್ ಪ್ರೈಸ್ ನೀಡುವುದಾಗಿ ಟ್ವಿಟ್ ಮಾಡಿದ್ದ ಸುದೀಪ್, ಇಂದು ಅಭಿಮಾನಿಗಳ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ವಿಕ್ರಾಂತ ರೋಣ ಸಿನಿಮಾದ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದ್ದಾರೆ.

‘ವಿಕ್ರಾಂತ್ ರೋಣ’ ಸಿನಿಮಾದ ಚಿತ್ರೀಕರಣದ ಸಿದ್ಧತೆಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೆವು. ಇದೀಗ ಮತ್ತೊಂದು ರೋಮಾಂಚನಕಾರಿ ಸುದ್ದಿಯೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಸಮಯ ಬಂದಿದೆ. ಆಗಸ್ಟ್​ 19ರಂದು ‘ವಿಕ್ರಾಂತ್ ರೋಣ’ ಸಿನಿಮಾ ಭಾರತದಾದ್ಯಂತ ಬಿಡುಗಡೆಯಾಗಲಿದೆ ಎಂದು ತಿಳಿಸಲು ನಮ್ಮ ತಂಡಕ್ಕೆ ಖುಷಿಯಾಗುತ್ತಿದೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

ಇನ್ನು ‘ವಿಕ್ರಾಂತ್ ರೋಣ’ ಸಿನಿಮಾವನ್ನು ರಂಗಿತರಂಗ, ರಾಜರಥ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಜಾಕ್ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾದಲ್ಲಿ ಕಿಚ್ಚ ಸುದೀಪ್, ನಿರೂಪ್ ಭಂಡಾರಿ, ನೀತಾ ಅಶೋಕ್, ರವಿಶಂಕರ್ ಗೌಡ ಸೇರಿದಂತೆ ಹಲವು ನಟರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಕನ್ನಡ, ತಮಿಳು, ತೆಲಗು ಹಾಗೂ ಹಿಂದಿ ಸೇರಿದಂತೆ ಬಹುಭಾಷೆಯಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next