Advertisement

46ನೇ ವಸಂತಕ್ಕೆ ಕಾಲಿಟ್ಟ ಕಿಚ್ಚ ಸುದೀಪ್: ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರ

09:42 AM Sep 03, 2019 | Mithun PG |

ಬೆಂಗಳೂರು: 46ನೇ ವಸಂತಕ್ಕೆ ಕಾಲಿಟ್ಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ತಮ್ಮ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸುದೀಪ್ ಅವರ ಜೆ.ಪಿ ನಗರದ ನಿವಾಸಕ್ಕೆ ಆಗಮಿಸಿ ಶುಭ ಹಾರೈಸಿದ್ದಾರೆ.

Advertisement

ಗಣೇಶ ಹಬ್ಬದ ಜೊತೆಜೊತೆಗೆ ತಮ್ಮ ನೆಚ್ಚಿನ ನಟನ  ಜನ್ಮದಿನವನ್ನೂ ಅದ್ದೂರಿಯಾಗಿ ಆಚರಿಸುತ್ತಿರುವ ಅಭಿಮಾನಿಗಳು ರಕ್ತದಾನ, ಅನ್ನದಾನದ ಮೂಲಕ ಸಂಭ್ರಮಿಸುತ್ತಿದ್ದಾರೆ. ಮತ್ತೊಂದೆಡೆ ಉತ್ತರ ಕರ್ನಾಟಕದ ಪ್ರವಾಹ ಹಿನ್ನಲೆಯಲ್ಲಿ ವಿಜೃಂಭಣೆಯ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳದಿರಲು ಸುದೀಪ್ ನಿರ್ಧರಿಸಿದ್ದಾರೆ.

ನಟ ಸುದೀಪ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದ್ದು ಚಿತ್ರರಂಗದ ಗಣ್ಯರು ಸೇರಿದಂತೆ  ಹಲವರು ಶುಭಹಾರೈಸಿದ್ದಾರೆ.

ಪೈಲ್ವಾನ್ ಚಿತ್ರತಂಡ ಹುಟ್ಟು ಹಬ್ಬದ ಸಂಭ್ರಮ ಕ್ಷಣಕ್ಕೆ ಸಾಕ್ಷಿಯಾಗಿ ಒಂದು ಹಾಡನ್ನು ಕೂಡ ಬಿಡುಗಡೆ ಮಾಡಿದ್ದು ಇದೇ 12 ರಂದು ವಿಶ್ವದಾದ್ಯಂತ 5 ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರಲಿದೆ.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next