Advertisement

“ಉಸಿರೇ ಉಸಿರೇ’ಚಿತ್ರದಲ್ಲಿ ನಟ ಸುದೀಪ್‌

04:22 PM Apr 10, 2023 | Team Udayavani |

ಎನ್‌ ಗೊಂಬೆ ಲಾಂಛನದಲ್ಲಿ ಪ್ರದೀಪ್‌ ಯಾದವ್‌ ನಿರ್ಮಾಣದ, ಸಿ ಎಂ ವಿಜಯ್‌ ನಿರ್ದೇಶನದ “ಉಸಿರೇ ಉಸಿರೇ’ ಚಿತ್ರದಲ್ಲಿ ನಟ ಸುದೀಪ್‌ ಅಭಿನಯಿಸುತ್ತಿದ್ದಾರೆ. ಸದ್ಯ ಈಗಾಗಲೇ ಉಸಿರೇ ಉಸಿರೇ ಚಿತ್ರಕ್ಕೆ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಸುದೀಪ್‌ ನಟಿಸುತ್ತಿದ್ದಾರೆ. ಕೊನೆಯ ಹಂತದ ಚಿತ್ರೀಕರಣ ಭರದಿಂದ ಸಾಗುತ್ತಿದೆ.

Advertisement

ರಾಜೀವ್‌ ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್‌,

ರಾಜೇಶ್‌ ನಟರಂಗ, ಆಲಿ,ಬ್ರಹ್ಮಾನಂದಮ್, ಸಾಧುಕೋಕಿಲ, ದೇವರಾಜ್‌, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಸುದೀಪ್‌ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸಿ.ಎಂ. ವಿಜಯ್‌ ನಿರ್ದೇಶನದ ಈ ಚಿತ್ರಕ್ಕೆ ಮನು ಬಿ ಕೆ ಛಾಯಾಗ್ರಹಣ, ಕೆ ಎಂ ಪ್ರಕಾಶ್‌ ಸಂಕಲನ, ಟೈಗರ್‌ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್‌ ಮತ್ತು ಹೈಟ್‌ ಮಂಜು ಅವರ ನೃತ್ಯ

ನಿರ್ದೇಶನವಿದೆ ವಿವೇಕ್‌ ಚಕ್ರವರ್ತಿ ಅವರ ಸಂಗೀತ ನಿರ್ದೇಶನ ಉಸಿರೇ ಉಸಿರೇ ಚಿತ್ರಕ್ಕಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next