ಶಿಕಾರಿಪುರ : ಮಾಜಿ ಮುಖ್ಯಮಂತ್ರಿ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಪ್ರತಿನಿಧಿಸಿದ್ದ ಶಿಕಾರಿಪುರದಲ್ಲಿ ಸೋಮವಾರ ಖ್ಯಾತ ನಟ ಕಿಚ್ಚ ಸುದೀಪ್ ಅವರು ಬೃಹತ್ ರೋಡ್ ಶೋನಲ್ಲಿ ಭಾಗಿಯಾಗಿ ಬಿ.ವೈ.ವಿಜಯೇಂದ್ರ ಅವರ ಪರ ಮತ ಯಾಚಿಸಿದರು.
”ನಮ್ಮ ಶಿಕಾರಿಪುರದಲ್ಲಿಂದು ಅಭಿನಯ ಚಕ್ರವರ್ತಿ ಶ್ರೀ ಕಿಚ್ಚ ಸುದೀಪ್ ಅವರೊಂದಿಗೆ ಬೃಹತ್ ರೋಡ್ ಶೋ ನಡೆಸಿ ಚುನಾವಣಾ ಪ್ರಚಾರ ನಡೆಸಲಾಯಿತು. ಮಾನ್ಯ ಸುದೀಪ್ ಅವರು ನನ್ನ ಮೇಲಿನ ವಿಶೇಷವಾದ ಪ್ರೀತಿ ಹಾಗೂ ವಿಶ್ವಾಸದಿಂದ ಆಗಮಿಸಿ ನನ್ನ ಪರವಾಗಿ ಪ್ರಚಾರ ನಡೆಸಿ ಪಕ್ಷವನ್ನು ಹಾಗೂ ನನ್ನನ್ನು ಬೆಂಬಲಿಸಿದ್ದಕ್ಕೆ ನಾನು ಆಭಾರಿಯಾಗಿದ್ದೇನೆ.” ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ರೋಡ್ ಶೋ ನಲ್ಲಿ ಸಂಸದ ರಾಘವೇಂದ್ರ , ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗುರುಮೂರ್ತಿ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಹೆಚ್.ಟಿ.ಬಳಿಗಾರ್, ಪಕ್ಷದ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು, ಸುದೀಪ್ ಅಭಿಮಾನಿಗಳು ಭಾಗವಹಿಸಿದ್ದರು.