ಚಿತ್ರದುರ್ಗ: ಮದಕರಿ ನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ಬುಧವಾರ ನಟ ಕಿಚ್ಚ ಸುದೀಪ್ ಭರ್ಜರಿ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.
ಇಲ್ಲಿನ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಪರವಾಗಿ ಮತಯಾಚನೆ ಮಾಡಿದರು.
ಸುದೀಪ್ ರೋಡ್ ಶೋ ಕಾರಣಕ್ಕೆ ಅವರ ಸಾವಿರಾರು ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ರಸ್ತೆಯುದ್ದಕ್ಕೂ ನಿಂತು ಬಿಜೆಪಿ ಹಾಗೂ ನಟ ಸುದೀಪ್ ಅವರ ಪರ ಘೋಷಣೆ ಕೂಗಿದರು.
ಬೆಳಗ್ಗೆ 11 ಗಂಟೆ ಸುಮಾರಿಗೆ ಹೆಲಿಕಾಪ್ಟರ್ ಮೂಲಕ ಮೊಳಕಾಲ್ಮೂರಿಗೆ ಆಗಮಿಸಿದ ವೇಳೆ ಅಭಿಮಾನಿಗಳು ಮೊಳಕಾಲ್ಮೂರು ರೇಷ್ಮೆ ಶಾಲು ಹೊದಿಸಿ ಸನ್ಮಾನಿಸಿದರು.
ನಂತರ ನಟ ಸುದೀಪ್ ಅಭ್ಯರ್ಥಿ ತಿಪ್ಪೇಸ್ವಾಮಿ ಜೊತೆಗೆ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿ ನಂತರ ಜಗಳೂರಿಗೆ ತೆರಳಿದರು.