Advertisement

ಎಫ್ಐಆರ್ ರದ್ದುಗೊಳಿಸಿ; ಹೈಕೋರ್ಟ್ ಮೆಟ್ಟಿಲೇರಿದ BSY ಪಿಎ

10:26 AM Sep 01, 2017 | Team Udayavani |

ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪ ಪಿಎ ವಿನಯ್ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ತನ್ನ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪಿಎ ಸಂತೋಷ್ ಹೈಕೋರ್ಟ್ ಮೆಟ್ಟಿಲೇರಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

ವಿಧಾನಪರಿಷತ್​ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಪಿಎ ಸಂತೋಷ್ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ಬಂಧನಕ್ಕೀಡಾಗಿದ್ದ ಸಂತೋಷ್  ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

ಇದೀಗ ಮಹಾಲಕ್ಷ್ಮಿ ಲೇಔಟ್ ಪೊಲೀಸರ ವಿಚಾರಣೆ ಎದುರಿಸಬೇಕಾಗಿರುವ ಸಂತೋಷ್ ತನ್ನ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನೇ ರದ್ದುಗೊಳಿಸುವಂತೆ ಕೋರ್ಟ್ ಮೆಟ್ಟಿಲೇರಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next