Advertisement

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

11:46 PM Apr 19, 2024 | Team Udayavani |

ತುಮಕೂರು: “ಹುಬ್ಬಳ್ಳಿ ಯುವತಿ ಕೊಲೆ ಪ್ರಕರಣದಲ್ಲಿ ಪ್ರೀತಿ ನಿರಾಕರಿಸಿದ್ದಷ್ಟೇ ಕಂಡುಬಂದಿದೆ. ಯಾವುದೇ ಲವ್‌ ಜೆಹಾದ್‌ ಇಲ್ಲ’ ಎಂದು ಹೇಳಿರುವ ಗೃಹ ಸಚಿವ ಡಾ| ಜಿ.ಪರಮೇಶ್ವರ್‌, ಈ ಘಟನೆಗೂ ರಾಜಕೀಯಕ್ಕೂ ಸಂಬಂಧ ಇಲ್ಲ. ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

Advertisement

ನಗರದಲ್ಲಿ ಶುಕ್ರವಾರ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇಬ್ಬರೂ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಲವ್‌ ಅಫೇರ್‌ ಇತ್ತು. ಪರಸ್ಪರ ಪ್ರೀತಿಸುತ್ತಿದ್ದರು. ಅನಂತರ ಇದ್ದಕ್ಕಿದ್ದ ಹಾಗೆ ಆ ಹೆಣ್ಣು ಮಗಳು ದೂರ ಆಗಲು ಪ್ರಯತ್ನಿಸಿದಾಗ ಈ ಘಟನೆ ನಡೆದಿದೆ. ಮಗಳನ್ನು ಹಿಂಬಾಲಿಸುತ್ತಿದ್ದ ತಾಯಿಯ ಮೇಲೂ ಹಲ್ಲೆ ಮಾಡಿದ್ದಾರೆ. ಅವರನ್ನು ರಕ್ಷಿಸಲಾಗಿದೆ ಎಂದರು.

 

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next