Advertisement

ಕಿಮ್‌ಗೆ ವಿವಿಧ ಕಂಪನಿಗಳಿಂದ 570 ಬೆಡ್‌

06:36 PM May 03, 2021 | Team Udayavani |

ಹುಬ್ಬಳ್ಳಿ: ಕಿಮ್ಸ್‌ ಆಸ್ಪತ್ರೆಗೆ ವಿವಿಧ ಕಂಪನಿಗಳು ಸಾರ್ವಜನಿಕ ಹೊಣೆಗಾರಿಕೆ ನಿಧಿಯಡಿ ಸುಮಾರು 570 ಬೆಡ್‌ ನೀಡಿವೆ. ಸ್ವರ್ಣ ಗ್ರೂಪ್‌ ಆಫ್‌ ಕಂಪನೀಸ್‌, ದೇಶಪಾಂಡೆ ಫೌಂಡೇಶನ್‌, ಟಾಟಾ ಹಿಟಾಚಿ, ಟಾಟಾ ಮಾರ್ಕೊಪೋಲೊ ಕಂಪನಿಗಳು ಬೆಡ್‌ಗಳನ್ನು ನೀಡಿವೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜನರ ಸಮಸ್ಯೆಗಳಿಗೆ ಕಂಪನಿಗಳು ಸ್ಪಂದಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇನ್ನಷ್ಟು ಕಂಪನಿಗಳು ಚಿಕಿತ್ಸೆಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಭರವಸೆ ನೀಡಿವೆ. ವಾತಾವರಣದಲ್ಲಿನ ಗಾಳಿಯಿಂದ ಆಕ್ಸಿಜನ್‌ ಬೇರ್ಪಡಿಸಿ ರೋಗಿಗಳಿಗೆ ನೀಡುವ ಯಂತ್ರೋಪಕರಣಗಳನ್ನು ಖರೀದಿಸಲಾಗುತ್ತದೆ. ದೇಶದಲ್ಲಿ ಲಾಕ್‌ಡೌನ್‌ ಹೇರುವ ಬಗ್ಗೆ ತಜ್ಞರು ಸಲಹೆ ನೀಡುತ್ತಿದ್ದಾರೆ. ಈ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದರು.

ಸಚಿವ ಜಗದೀಶ ಶೆಟ್ಟರ ಮಾತನಾಡಿ, ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಕೋವಿಡ್‌ ರೋಗಿಗಳ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ನೀಡುವಂತೆ ಖಾಸಗಿ ಆಸ್ಪತ್ರೆಯವರಿಗೆ ಸೂಚನೆ ನೀಡಲಾಗಿದೆ. ಬೇರೆ ಜಿಲ್ಲೆಯಿಂದ ಕಿಮ್ಸ್‌ ಹಾಗೂ ಖಾಸಗಿ ಆಸ್ಪತ್ರೆಗೆ ಕೋವಿಡ್‌ ರೋಗಿಗಳು ದಾಖಲಾಗುತ್ತಿದ್ದಾರೆ. ಇಂತಹವರ ಪ್ರಮಾಣ ಶೇ.30ರಷ್ಟಿದೆ. ಮಾನವೀಯ ದೃಷ್ಟಿಯಿಂದ ಈ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಆಸ್ಪತ್ರೆಗಳನ್ನು ಸಶಕ್ತಗೊಳಿಸುವ ಕಾರ್ಯ ನಡೆಯುತ್ತಿದೆ. ಲಸಿಕೆ ಸಂಗ್ರಹ ಹಾಗೂ ವಿತರಣೆಯಲ್ಲಿ ತೊಂದರೆಯಾಗಿದೆ. ಇದನ್ನು ಅರಿಯಬೇಕು. ಮೇ 1ರಂದು ಲಸಿಕೆ ಏಕೆ ನೀಡಿಲ್ಲ ಎಂದು ರಾಜಕೀಯವಾಗಿ ಟೀಕೆ ಮಾಡಬಾರದು. ವಿರೋಧ ಪಕ್ಷದವರು ಹಿಂದೆ ಆಡಳಿತದಲ್ಲಿ ಇದ್ದವರೇ. ಅವರಿಗೆ ಪರಿಸ್ಥಿತಿಗಳ ಬಗ್ಗೆ ಅರಿವು ಇರುತ್ತದೆ. ಇದನ್ನು ಪರಾಮರ್ಶಿಸುವ ಬದಲು ಬೆಳಗಿನಿಂದ ಸಂಜೆವರೆಗೆ ಟೀಕೆ ಮಾಡುವಂತಾಗಬಾರದು ಎಂದರು.

ಸ್ವರ್ಣ ಗ್ರೂಪ್‌ ಆಪ್‌ ಕಂಪನಿಸ್‌ ವ್ಯವಸ್ಥಾಪಕ ನಿರ್ದೇಶಕ ಡಾ| ವಿ.ಎಸ್‌.ವಿ ಪ್ರಸಾದ್‌ ಮಾತನಾಡಿ, ಕಳೆದ ಬಾರಿಯೂ ಕಂಪನಿಯಿಂದ ಕಿಮ್ಸ್‌ಗೆ ಸಹಾಯ ಒದಗಿಸಲಾಗಿದೆ. ಈ ಬಾರಿ ನೆರವು ಒದಗಿಸಲು ಕೋರಿದಾಗ ಕೋವಿಡ್‌ ಆಸ್ಪತ್ರೆಗಳಿಗೆ ಹಾಸಿಗೆಗಳ ಅವಶ್ಯಕತೆ ಇದೆ ಎಂದು ತಿಳಿಸಿದ್ದರು. ಹಾಗಾಗಿ ಕಂಪನಿ ವತಿಯಿಂದ 100 ಮಂಚ, ಬೆಡ್‌ಶೀಟ್‌, ತಲೆದಿಂಬು, 100 ಸ್ಟ್ಯಾಂಡ್‌ಗಳನ್ನು ನೀಡಲಾಗಿದೆ. ಅವಶ್ಯವಿರುವ ಔಷಧ, ಡಿನ್ಪೋಸೆಬಲ್‌ ಸಿರಿಂಜ್‌, ಗ್ಲೌಸ್‌, ಲ್ಯಾಬೋರೇಟರಿಯಲ್ಲಿ ಅವಶ್ಯಕವಾದ ಔಷಧೋಪಕರಣಗಳನ್ನು ಕೇಳಿದ್ದಾರೆ. ಇವುಗಳನ್ನು ಸಹ ವಾರದಲ್ಲಿ ಕೊಡುವುದಾಗಿ ತಿಳಿಸಿದರು. ಜಿಲ್ಲಾ ಧಿಕಾರಿ ನಿತೇಶ ಪಾಟೀಲ, ಕಿಮ್ಸ್‌ ನಿರ್ದೇಶಕ ಡಾ| ರಾಮಲಿಂಗಪ್ಪ ಅಂಟರತಾನಿ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next