Advertisement

North Korea: ಪ್ರವಾಹ ತಡೆಯಲು ವಿಫಲರಾದ 30 ಅಧಿಕಾರಿಗಳನ್ನ ಗಲ್ಲಿಗೆ ಹಾಕಿ-ಕಿಮ್‌ ಜಾಂಗ್!

04:24 PM Sep 04, 2024 | Team Udayavani |

ಪ್ಯಾಂಗ್ಯಾಂಗ್ (ಉತ್ತರ ಕೊರಿಯಾ): ಸದಾ ಒಂದಲ್ಲ, ಒಂದು ವಿಚಾರದಲ್ಲಿ ಸುದ್ದಿಯಲ್ಲಿರುವ ದಕ್ಷಿಣ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್(‌Kim Jong Un) ಇದೀಗ ರಣಭೀಕರ ಪ್ರವಾಹ ಮತ್ತು ಭೂಕುಸಿತ ತಡೆಯಲು ವಿಫಲರಾದ ಸುಮಾರು 30 ಅಧಿಕಾರಿಗಳನ್ನು ಗಲ್ಲಿಗೇರಿಸಲು (Execution) ಆದೇಶ ನೀಡಿರುವುದಾಗಿ ವರದಿ ತಿಳಿಸಿದೆ.

Advertisement

ಉತ್ತರ ಕೊರಿಯಾದ ಸುರಿದ ಭಾರೀ ಮಳೆ ಪ್ರವಾಹದಲ್ಲಿ ಸುಮಾರು 1,000 ಜನರು ಸಾವನ್ನಪ್ಪಿದ್ದರು. ಉತ್ತರ ಕೊರಿಯಾದ ಚೋಸನ್‌ ಟಿವಿ ವರದಿ ಪ್ರಕಾರ, ಇತ್ತೀಚೆಗಿನ ಪ್ರವಾಹದಲ್ಲಿ ಜನರು ಜೀವಕಳೆದುಕೊಂಡಿರುವುದು ಒಪ್ಪಿಕೊಳ್ಳಲು ಸಾಧ್ಯವಿಲ್ಲದ ನಷ್ಟವಾಗಿದೆ. ಇದಕ್ಕೆ ಕಾರಣರಾದ ಅಧಿಕಾರಿಗಳಿಗೆ ಕಠಿನ ಶಿಕ್ಷೆ ನೀಡುವುದಾಗಿ ಕಿಮ್‌ ಜಾಂಗ್‌ ಘೋಷಿಸಿರುವುದಾಗಿ ತಿಳಿಸಿದೆ.

ಪ್ರವಾಹ, ಭೂಕುಸಿತ ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ಬೇಜವಾಬ್ದಾರಿ ಹೊಣೆಗಾರಿಕೆ ಮತ್ತು ಭ್ರಷ್ಟಾಚಾರದ ಆರೋಪ ಹೊರಿಸಿದ್ದು, ಕಳೆದ ತಿಂಗಳಾಂತ್ಯದಲ್ಲಿ 30 ಅಧಿಕಾರಿಗಳನ್ನು ಗಲ್ಲಿಗೇರಿಸಲಾಗಿತ್ತು ಎಂದು ವರದಿ ವಿವರಿಸಿದೆ.

ಪ್ರವಾಹಪೀಡಿತ ಪ್ರದೇಶದಲ್ಲಿನ 20ರಿಂದ 30 ಅಧಿಕಾರಿಗಳನ್ನು ಕಳೆದ ತಿಂಗಳಾಂತ್ಯದಲ್ಲಿ ಗಲ್ಲಿಗೇರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಈ ಎಲ್ಲಾ ವಿವರಗಳ ಜತೆ ಮರಣದಂಡನೆಗೊಳಗಾದ ಅಧಿಕಾರಿಗಳ ಹೆಸರನ್ನು ಮಾತ್ರ ಬಹಿರಂಗಗೊಳಿಸಿಲ್ಲ ಎಂದು ವರದಿ ಹೇಳಿದೆ.

Advertisement

ಉತ್ತರ ಕೊರಿಯಾದಲ್ಲಿ ಜುಲೈ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹ ಹಾಗೂ ಭೂಕುಸಿತದಲ್ಲಿ 4 ಸಾವಿರಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದ್ದು, 15 ಸಾವಿರ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು. ಈ ಪ್ರದೇಶಗಳಿಗೆ ಸ್ವತಃ ಕಿಮ್‌ ಜಾಂಗ್‌ ಉನ್‌ ಭೇಟಿ ನೀಡಿ ಪರಿಶೀಲಿಸಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next