ತೀರ್ಥಹಳ್ಳಿ : ಕಾಂಗ್ರೆಸ್ ಪಕ್ಷ ಚುನಾವಣೆಗೂ ಮೊದಲು ಭರವಸೆ ನೀಡಿದ್ದ 5 ಗ್ಯಾರಂಟಿಗಳಲ್ಲಿ ಈಗಾಗಲೇ ನಾಲ್ಕು ಗ್ಯಾರೆಂಟಿ ಯೋಜನೆಯನ್ನು ಜನರಿಗೆ ತಲುಪಿಸಿದ್ದೇವೆ. ಈಗಾಗಲೇ 1 ಕೋಟಿ ಕುಟುಂಬಕ್ಕೆ ಯೋಜನೆ ತಲುಪಿದೆ. ಕೆಲವೊಂದು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸಮಸ್ಯೆ ಆಗಿದ್ದರೆ ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ಸೋಮವಾರ ಪಟ್ಟಣದ ಗಾಂಧಿಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸರ್ಕಾರದ ಕಡೆಯ ಗ್ಯಾರೆಂಟಿ ಯೋಜನೆಯಾದ ಯುವ ನಿಧಿಗೆ ಜ.12 ರಂದು ಶಿವಮೊಗ್ಗದಲ್ಲಿ ಚಾಲನೆ ನೀಡಲಿದ್ದೇವೆ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ ಸಿ ಸುಧಾಕರ್, ಶರಣ ಪ್ರಕಾಶ್ ಪಾಟೀಲ್ ಭಾಗಿಯಾಗರಲಿದ್ದಾರೆ ಈ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಭಾಗಿಯಾಗಬೇಕು ಎಂದು ಮನವಿ ಮಾಡಿದರು.
ಯಾವ ಗ್ಯಾರಂಟಿಯನ್ನು ಅನುಷ್ಠಾನ ಮಾಡದೇ ಇರುವ ಬಿಜೆಪಿಯವರು ನಮ್ಮ ಬಗ್ಗೆ ಆಪಾದನೆ ಮಾಡುತ್ತಿದ್ದಾರೆ. ಕೆಲವು ಮಹಿಳೆಯರಿಗೆ ಹಣ ಬಂದಿರಲಿಲ್ಲ ಆದರೆ ಒಟ್ಟಿಗೆ ಹಣ ಬಂದವರು ಇದ್ದಾರೆ. ಈಗಾಗಲೇ ಪಟ್ಟಣ ಪಂಚಾಯತ್ ಸದಸ್ಯರಿಗೆ ತಿಳಿಸಿದ್ದೇನೆ. ಯಾರಿಗೆ ಹಣ ಬಂದಿಲ್ಲವೆಂದು ನೀವೇ ಅವರ ಮನೆಗೆ ಹೋಗಿ ತಿಳಿದುಕೊಳ್ಳಿ ಎಂದು.ಮುಂದೆ ಗ್ರಾಮಪಂಚಾಯಿತಿ ಸದಸ್ಯರಿಗೂ ಇದೆ ರೀತಿ ಹೇಳುತ್ತೇವೆ. ಕೆಲವೊಂದು ಮಿಸ್ಟೇಕ್ ಆಗುತ್ತವೆ ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ, ಕಲಗೋಡು ರತ್ನಾಕರ್, ದಿನೇಶ್, ವಿಶ್ವನಾಥ್ ಶೆಟ್ಟಿ, ರಮೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗೀತಾ ರಮೇಶ್, ಉಪಾಧ್ಯಕ್ಷ ರಹಮತ್ ಉಲ್ಲಾ ಅಸಾದಿ, ಪ ಪಂ ಸದಸ್ಯರಾದ ಮಂಜುಳಾ ನಾಗೇಂದ್ರ, ಶಬನಮ್,ಸುಶೀಲ ಶೆಟ್ಟಿ ರತ್ನಾಕರ್ ಶೆಟ್ಟಿ, ಪಟಮಕ್ಕಿ ಮಹಾಬಲೇಶ್, ಅಮರನಾಥ್ ಶೆಟ್ಟಿ, ಆದರ್ಶ ಹುಂಚದಕಟ್ಟೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ: Bangladesh; ರಾಜಕೀಯ ಇನ್ನಿಂಗ್ಸ್ ನಲ್ಲೂ ಉತ್ತಮ ಆರಂಭ: ಚುನಾವಣೆ ಗೆದ್ದ ಶಕಿಬ್ ಅಲ್ ಹಸನ್