Advertisement

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್‌ ಕೊಹ್ಲಿ!

06:29 PM Mar 30, 2023 | Team Udayavani |

ಮುಂಬೈ: ಕಿಂಗ್‌ ಕೊಹ್ಲಿ ಭಾರತ ಕ್ರಿಕೆಟ್‌ ತಂಡದ ನಾಯಕನಾಗಿರದಿದ್ರೂ ಒಂದಿಲ್ಲೊಂದು ಕಾರಣದಿಂದ ಸದಾ ಸುದ್ದಿಯಲ್ಲಿರುತ್ತಾರೆ. ಗುರುವಾರ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಮಾರ್ಕ್ಸ್‌ಕಾರ್ಡ್‌ನ್ನು ಶೇರ್‌ ಮಾಡುವ ಮೂಲಕ ಸ್ಟಾರ್‌ ಬ್ಯಾಟರ್‌ ಮತ್ತೆ ಸದ್ದು ಮಾಡಿದ್ದಾರೆ.

Advertisement

ಭಾರತದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ, ಗುರುವಾರ ಸಾಮಾಜಿಕ ಜಾಲತಾಣದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿಯನ್ನು ಶೇರ್‌ ಮಾಡಿಕೊಂಡಿದ್ದಾರೆ.ಇತ್ತೀಚೆಗೆ ನಡೆದ ಬಾರ್ಡರ್‌-ಗವಾಸ್ಕರ್‌ ಟೆಸ್ಟ್‌ ಪಂದ್ಯದಲ್ಲಿ ತಮ್ಮ ಶತಕದ ಬರವನ್ನು ನೀಗಿಸಿದ ಕೊಹ್ಲಿ ಐಪಿಎಲ್‌ನಲ್ಲಿ ಸಿಡಿಯುವ ಭರವಸೆ ನೀಡಿದ್ಧಾರೆ.

ಭಾರತ ಮೂಲದ ಕೂ ಆಪ್‌ನಲ್ಲಿ ತಮ್ಮ ಅಂಕ ಪಟ್ಟಿಯನ್ನು ಹಂಚಿಕೊಂಡಿರುವ ವಿರಾಟ್‌ ಅದಕ್ಕೆ ಫನ್ನಿ ಕ್ಯಾಪ್ಷನ್‌ ಕೂಡಾ ನೀಡಿದ್ದಾರೆ.ಐಪಿಎಲ್‌ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿರುವ ಹೊತ್ತಲ್ಲೇ ಕಿಂಗ್‌ ಕೊಹ್ಲಿಯ ಈ ಪೋಸ್ಟ್‌ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

ಇದನ್ನೂ ಓದಿಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next