Advertisement

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

09:08 PM Oct 18, 2024 | Team Udayavani |

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ದಾಮಸ್‌ಕಟ್ಟೆ ಬಳಿ ಬುಧವಾರ ಸಂಜೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೈಮೇಲೆ ಕೈ ಹಾಕಿ ಕಿರುಕುಳ ನೀಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಪಟ್ಟೆ ಕ್ರಾಸ್‌ ಸಮೀಪದ ಉಳೆಪಾಡಿ ನಿವಾಸಿ ಬಾಬು ಮುಖಾರಿ ಆರೋಪಿ. ವಿದ್ಯಾರ್ಥಿನಿ ದಾಮಸ್‌ ಕಟ್ಟೆಯಲ್ಲಿ ಬಸ್ಸಿನಿಂದ ಇಳಿದು ಸುಂಕದಕಟ್ಟೆ (ಪಟ್ಟೆ) ರಸ್ತೆಯಲ್ಲಿ ಹೋಗುತ್ತಿರುವಾಗ ಆರೋಪಿ ಹಿಂಬಾಲಿಸಿಕೊಂಡು ಬಂದು ಕಿರುಕುಳ ನೀಡಲು ಯತ್ನಿಸಿದ್ದ.

ಆರೋಪಿಯನ್ನು ತಳ್ಳಿ ಹಾಕಿ ವಿದ್ಯಾರ್ಥಿನಿ ಓಡಿ ಹೋಗಿದ್ದು, ಸ್ಥಳೀಯರಿಗೆ ಮಾಹಿತಿ ನೀಡಿದ್ದರು. ಸ್ಥಳೀಯರ ಸಹಕಾರದಿಂದ ಮೂಲ್ಕಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next