Advertisement

12ರಂದು ಕಿರಣ್‌ಕುಮಾರ್‌ಗೆ “ಬಸವಶ್ರೀ’ಪ್ರಶಸ್ತಿ ಪ್ರದಾನ

11:30 PM May 08, 2019 | Lakshmi GovindaRaj |

ಬೆಂಗಳೂರು: ಬಸವ ವೇದಿಕೆ ಈ ವರ್ಷದ “ಬಸವಶ್ರೀ’ ಪ್ರಶಸ್ತಿಯನ್ನು ಇಸ್ರೋದ ಮಾಜಿ ಅಧ್ಯಕ್ಷ ಡಾ.ಎ.ಎಸ್‌.ಕಿರಣ್‌ಕುಮಾರ್‌ ಹಾಗೂ “ವಚನ ಸಾಹಿತ್ಯಶ್ರೀ’ ಪ್ರಶಸ್ತಿಯನ್ನು ಕವಿ ಜರಗನಹಳ್ಳಿ ಶಿವಶಂಕರ್‌ ಮತ್ತು ಸಾಹಿತಿ ಡಾ.ನಾ.ಮೊಗಸಾಲೆ ಅವರಿಗೆ ಘೋಷಿಸಿದೆ. ಮೇ12ರ ಬೆಳಗ್ಗೆ 10.30ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ “ಬಸವ ಜಯಂತಿ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Advertisement

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಸವ ವೇದಿಕೆ ಅಧ್ಯಕ್ಷ ಡಾ.ಸಿ.ಸೋಮಶೇಖರ್‌, ಬಸವಾದಿ ಶರಣರ ವಿಚಾರಧಾರೆಗೆ ಅನುಗುಣವಾಗಿ ಸಾಮಾಜಿಕ ಸೇವೆ ಸಲ್ಲಿಸಿರುವ ಸಾಧಕರಿಗೆ “ಬಸವಶ್ರೀ’ ಹಾಗೂ ವಚನ ಸಾಹಿತ್ಯದಲ್ಲಿ ಸಾಕಷ್ಟು ಕೃತಿ ಮಾಡಿರುವವರಿಗೆ “ವಚನ ಸಾಹಿತ್ಯಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಮೈಸೂರು ರಾಜಮನೆತನದ ಯದುವೀರ ಕೃಷ್ಣದತ್ತ ಒಡೆಯರ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಗದ್ಗುರು ತೋಂಟದಾರ್ಯ ಮಠದ ತೋಂಟದ ಸಿದ್ಧಲಿಂಗ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದು, ಪಾವಗಡ ಶ್ರೀರಾಮಕೃಷ್ಣ ಸೇವಾಶ್ರಮದ ಜಪಾನಂದ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಮೂಡಬಿದರೆ ಆಳ್ವಾಸ್‌ ಶೈಕ್ಷಣಿಕ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರು ಬಸವ ಜ್ಯೋತಿ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ರಂಗಕರ್ಮಿ ಬಿ.ಜಯಶ್ರೀ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಮನು ಬಳಿಗಾರ್‌ ವಚನ ಸಾಹಿತ್ಯಶ್ರೀ ಪ್ರಶಸ್ತಿಯನ್ನು ಪುರಸ್ಕೃತರಿಗೆ ನೀಡಿ ಗೌರವಿಸಲಿದ್ದಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next