ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರೈತ ಸಮುದಾಯದ ಸಮಸ್ಯೆ ಆಲಿಸಿ ಪರಿಹಾರ ಕಂಡುಕೊಳ್ಳಲು ಹಾಗೂ ಕಾಂಗ್ರೆಸ್ ಕಾರ್ಯಕ್ರಮಗಳನ್ನು ರೈತರಿಗೆ ತಲುಪಿಸಲು ಇಂದಿನಿಂದ (ಸೋಮವಾರ)ಕಿಸಾನ್ ಘರ್ ಪೆ ಚರ್ಚಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮೀಗಾ ಹೇಳಿದ್ದಾರೆ.
ಆ ಮೂಲಕ ಕಳೆದ ಚುನಾವಣೆಯಲ್ಲಿ ನರೇಂದ್ರ ಮೋದಿ ಆರಂಭಿಸಿದ್ದ “ಚಾಯ್ ಪೆ ಚರ್ಚಾ’ಕಾರ್ಯಕ್ರಮ ಮಾದರಿಯನ್ನು ಕಾಂಗ್ರೆಸ್ ಅನುಸರಿಸುತ್ತಿದೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರೈತರೊಂದಿಗೆ ಚರ್ಚಿಸಲು ಕಿಸಾನ್ ಘರ್ ಪೆ ಚರ್ಚಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಕ್ಷದ ಕಿಸಾನ್ ಘಟಕದ ರಾಷ್ಟ್ರೀಯ ಅಧ್ಯಕ್ಷ ನಾನಾ ಪಟೋಲೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯುವ ಶಿಬಿರದಲ್ಲಿ ಸುಮಾರು 2500 ರೈತ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲಾ, ಬ್ಲಾಕ್ ಹಾಗೂ ಗ್ರಾಮ ಪಂಚಾಯಿತಿ ಕಿಸಾನ್ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೂತನ ಪದಾಧಿಕಾರಿಗಳಿಗೆ ಸನ್ಮಾನ ಮಾಡಲಿದ್ದಾರೆ. ಅಲ್ಲದೇ ರೈತರ ಪರವಾಗಿ ನ್ಯಾಯಾಲಯ ದಲ್ಲಿ ಹೋರಾಟ ಮಾಡಿ ಜಯ ಗಳಿಸಿರುವ ರೈತ ಮುಖಂಡರಿಗೂ ಸನ್ಮಾನ ಮಾಡಲಾಗುವುದು ಎಂದರು.
ರೈತರ ಹಣ ಲೂಟಿ ಮಾಡಿದ ಪ್ರಧಾನಿ: ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದಟಛಿ ವಾಗ್ಧಾಳಿ ನಡೆಸಿದ ಅವರು, ದೇಶದ ರೈತರ ವಿಮಾ ಹಣವನ್ನು ಅನಿಲ್ ಅಂಬಾನಿ ಹಾಗೂ ಗೌತಮ್ ಅದಾನಿಗೆ ದೊರೆಯುವಂತೆ ಮಾಡಿ, ದೇಶದ ರೈತರ ಹಣ ನುಂಗಿದ ಮೊದಲ ಪ್ರಧಾನಿ ನರೇಂದ್ರ ಮೋದಿ ಎಂದು ಆರೋಪಿಸಿದರು.