Advertisement

ಕಿಸಾನ್‌ ಸಮ್ಮಾನ್‌ ಯೋಜನೆಯ 1 ಸಾ. ಕೋ. ರೂ. ಬಿಡುಗಡೆ: ಬಿ.ಸಿ.ಪಾಟೀಲ್‌

11:23 AM Aug 17, 2020 | sudhir |

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ರಾಜ್ಯಕ್ಕೆ 1,000 ಕೋ. ರೂ. ಬಿಡುಗಡೆಯಾಗಿದ್ದು, ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್‌ ತಿಳಿಸಿದ್ದಾರೆ.

Advertisement

ಫೇಸ್‌ಬುಕ್‌ ಲೈವ್‌ನಲ್ಲಿ ರೈತರನ್ನುದ್ದೇಶಿಸಿ ಮಾತನಾಡಿದ ಸಚಿವರು, ರೈತರು ತಮ್ಮ ಖಾತೆಯನ್ನು ಪರಿಶೀಲಿಸಬೇಕೆಂದು ಮನವಿ ಮಾಡಿದ್ದಾರೆ.

2019-20ನೇ ಸಾಲಿನ ಬೆಳೆ ವಿಮೆ ಬರುವ ಮಂಗಳವಾರದಿಂದ ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದ್ದು, ವಿಮೆ ವಿಚಾರದಲ್ಲಿ ರೈತರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ರಾಜ್ಯ ಸರಕಾರ ಮತ್ತು ಇಲಾಖೆ ರೈತರಿಗೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಹೇಳಿದರು.

ಇಲಾಖೆಯ ವೃಂದ ಮತ್ತು ನೇಮಕಾತಿ ಪ್ರಕ್ರಿಯೆಗೆ ನಿಯಮಗಳ ಕರಡು ರಚನೆ ಅಂತಿಮ ಹಂತದಲ್ಲಿದ್ದು, ಆದಷ್ಟು ಬೇಗ ರೈತಮಿತ್ರರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next