Advertisement

Kishkindha ಅಂಜನಾದ್ರಿ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ಕಾರು ಅಪಘಾತ; ಸಣ್ಣಪುಟ್ಟ ಗಾಯ

04:01 PM Apr 05, 2024 | Team Udayavani |

ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂಧಾ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ಅವರು ಸಂಚರಿಸುತ್ತಿದ್ದ ಕಾರು ಅಪಘಾತವಾಗಿ ಸಣ್ಣ-ಪುಟ್ಟ ಗಾಯಗಳಾದ ಘಟನೆ ಪಂಪಾಸರೋವರ ಅಂಜನಾದ್ರಿ ರಸ್ತೆ ಕ್ರಾಸ್ ಬಳಿ ನಡೆದಿದೆ.

Advertisement

ಅಂಜನಾದ್ರಿಯಿಂದ ಗಂಗಾವತಿ ಕಡೆ ಬರುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ಕಾರಿನ ಮುಂದಿನ ಎಡಭಾಗದ ಬೈನೈಟ್ ಜಖಂಗೊಂಡಿದೆ. ಸ್ಥಳದಲ್ಲಿದ್ದವರು ಮಹಾಂತ ವಿದ್ಯಾದಾಸ ಬಾಬಾ ಅವರನ್ನು ಆನೆಗೊಂದಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಬಾಬಾ ಚೇತರಿಸಿಕೊಳ್ಳುತ್ತಿದ್ದಾರೆ.

ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೇ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next