Advertisement

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

01:12 PM Jan 10, 2025 | Team Udayavani |

ಬೆಂಗಳೂರು: ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್‌ ಕುಮಾರ್‌ ಜಿ. ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿ ಯಾಗಿ ನೇಮ ಕಗೊಂಡಿದ್ದಾಾರೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದಾರೆ.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್ಸ್‌ ಮೂಲಕ ನಟ ಕಿಶೋರ್‌ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಮಾರ್ಚ್‌ 1 ರಿಂದ 8ರ ವರೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದು, ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ಖ್ಯಾತ ನಟ ಕಿಶೋರ್‌ ಕುಮಾರ್‌ ಅವರನ್ನು ಚಿತ್ರೋತ್ಸ ವದ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿ ರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಬೆಲ್ಜಿಯಂನ ಫಿಫಾ ಅಂತಾ ರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋ ತ್ಸವವಾಗಿದೆ. ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನ ಹಾಗೂ ಚಲನಚಿತ್ರಗಳಿಗೆ ಸಂಬಂಧಿಸಿ ದಂತೆ ಕಾರ್ಯಾಗಾರಗಳು, ವಿಚಾರ ಸಂಕಿರಣ ಇನ್ನಿತರ ಚಿತ್ರರಂಗಕ್ಕೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೆ ಸಭೆ ನಡೆಸಿ, ಚಿತ್ರೋತ್ಸವದ ದಿನಾಂಕ ಘೋಷಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ “ಸರ್ವ ಜನಾಂಗದ ಶಾಂತಿಯ ತೋಟ’ ಶೀರ್ಷಿಕೆಯಡಿ ಪ್ರಸಕ್ತ ಸಾಲಿನಲ್ಲಿ ನಡೆಯುತ್ತಿದೆ.

ಚಿತ್ರೋತ್ಸವಕ್ಕೆ ದೇಶ-ವಿದೇಶಗಳಿಂದ ಅತ್ಯುನ್ನತ ಚಿತ್ರಗಳನ್ನು ತರುವ ಕುರಿತು ಹಾಗೂ ದೇಶ-ವಿದೇಶಗಳ ಸಿನಿಮಾ ರಂಗದ ಗಣ್ಯಾತಿಗಣ್ಯರನ್ನು ಚಿತ್ರೋತ್ಸವದಲ್ಲಿ ಭಾಗವಹಿಸಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದರು. ಚಲನಚಿತ್ರೋತ್ಸವಕ್ಕೆ “ಸರ್ವ ಜನಾಂಗದ ಶಾಂತಿಯ ತೋಟ’ ಶೀರ್ಷಿಕೆ: ಸಿಎಂ “ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಘೋಷವಾಕ್ಯದಡಿ ಈ ಬಾರಿಯ ಚಲನಚಿತ್ರೋತ್ಸವ ವನ್ನು ಆಯೋಜಿಸಲಾಗುತ್ತಿದೆ.

Advertisement

ಈ ಸಾಲುಗಳಿಗೆ ಬದ್ಧವಾಗಿರುವ ಕಿಶೋರ್‌ ಅವರ ಮುಂದಾಳತ್ವದಲ್ಲಿ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿ ಯಾಗಲಿದೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ ಮೂಲಕ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next