ಜೇವರ್ಗಿ: ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಡ ಹಾಗೂ ನಿರ್ಗತಿಕ ಕುಟುಂಬಗಳಿಗೆ ಎ.ಬಿ. ಪಾಟೀಲ ಫೌಂಡೇಶನ್ ವತಿಯಿಂದ ಆಹಾರ ಧಾನ್ಯದ ಕಿಟ್ ವಿತರಿಸಲಾಗುತ್ತಿದೆ ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಹೇಳಿದರು.
ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಆಹಾರ ಧಾನ್ಯದ ಕಿಟ್‌ಗಳನ್ನು ವಿತರಿಸಿ ಮಾತನಾಡಿದ ಅವರು, ಲಾಕ್‌ಡೌನ್‌ದಿಂದ ದುಡಿಯುವ ಕೈಗಳಿಗೆ ಕೆಲಸವಿಲ್ಲ. ಹೀಗಾಗಿ ಆಹಾರದ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.
ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನ ಖಾಸಗಿ ಶಾಲೆ-ಕಾಲೇಜು ಶಿಕ್ಷಕರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ, ಪತ್ರಕರ್ತರಿಗೆ, ನಿರ್ಗತಿಕರಿಗೆ, ಅಲೆಮಾರಿ ಜನಾಂಗದವರಿಗೆ, ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗವಿಕಲರಿಗೆ ಆಹಾರ ಧಾನ್ಯದ ಕಿಟ್‌ಗಳನ್ನು ವಿತರಿಸುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ರಮೇಶಬಾಬು ವಕೀಲ, ಸುಷ್ಮಾ ರವಿ ಬಿರಾದಾರ, ತಾಲೂಕು ಆರೋಗ್ಯಾಧಿ ಕಾರಿ ಡಾ| ಸಿದ್ದು ಪಾಟೀಲ, ಕಲ್ಲಪ್ಪ ಯಾದವ, ಶಿವಲಿಂಗಪ್ಪಗೌಡ ಕಲ್ಲಹಂಗರಗಾ, ಅಕºರಸಾಬ್ ಅಂಕಲಗಾ, ಮಲ್ಲಿಕಾರ್ಜುನ ಬಿರಾದಾರ ಸೊನ್ನ, ವಿಜಯಕುಮಾರ ಪಾಟೀಲ ಸೇಡಂ, ಕೇದಾರಲಿಂಗಯ್ಯ ಹಿರೇಮಠ, ಶರಣು ಪೂಜಾರಿ, ರಾಕೇಶ ಹರಸೂರ, ಧಣಿ ರಾಜವಾಳ, ಖಲೀಲ್ ಕೋಳಕೂರ ಇದ್ದರು.