Advertisement

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 50 ಲಕ್ಷಕ್ಕೂ ಹೆಚ್ಚಿನ ಆಹಾರ ಕಿಟ್ ಗಳ ವಿತರಣೆ

04:57 PM May 11, 2020 | keerthan |

ಮಂಗಳೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುಮಾರು 50 ಲಕ್ಷಕ್ಕೂ ಹೆಚ್ಚಿನ ಆಹಾರ ಕಿಟ್ ಗಳನ್ನು ವಿತರಣೆ ಮಾಡಲಾಗಿದೆ.

Advertisement

ಮಂಗಳೂರಿನ ಸಂಸದರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಿಟ್ ಗಳನ್ನು ವಿತರಿಸಲಾಯಿತು.  ಒಂದು ಸಾವಿರ ಆರೋಗ್ಯ ಕಾರ್ಯಕರ್ತರಿಗೆ ಆಹಾರದ ಕಿಟ್ ವಿತರಣೆ ಮಾಡಲಾಯಿತು. ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘಕ್ಕೆ ಕಿಟ್ ಹಸ್ತಾಂತರ ಮಾಡಲಾಯಿತು.

ಸಂಸದ ನಳೀನ್ ಕುಮಾರ್ ಕಟೀಲು, ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ವೇದ ವ್ಯಾಸ ಕಾಮತ್, ಮ.ನ.ಪಾ ಮೇಯರ್ ದಿವಾಕರ್ ಪಾಂಡೇಶ್ವರ, ಹರಿಕೃಷ್ಣ ಬಂಟ್ವಾಳ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ, ಕುಮುದಾ ಜಿಲ್ಲಾ ಆಶಾ ಮೇಲ್ವಿಚಾರಕಿ ಮುಂತಾದವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next