Advertisement

ಸಾಧನೆಗೆ ಕಿತ್ತೂರು ರಾಣಿ ಚನ್ನಮ್ಮ ಸ್ಫೂರ್ತಿ

09:35 PM Oct 23, 2019 | Lakshmi GovindaRaju |

ಕೆ.ಆರ್‌.ನಗರ: ದಕ್ಷಿಣ ಭಾರತದ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರ ಇತಿಹಾಸದಲ್ಲಿ ವೀರ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ ಅಗ್ರ ಗಣ್ಯರು ಎಂದು ತಹಶೀಲ್ದಾರ್‌ ಎಂ.ಮಂಜುಳಾ ಮೆಚ್ಚುಗೆ ವ್ಯಕ್ತಪಡಿಸಿದರು.

Advertisement

ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ ಹಾಗೂ ಪುರಸಭೆ ಸಂಯುಕ್ತಾಶ್ರಯದಲ್ಲಿ ಬುಧುವಾರ ಆಯೋಜಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯಲ್ಲಿ ಮಾತನಾಡಿದ ಅವರು ವೀರತನ, ಧೈರ್ಯ, ಶೌರ್ಯ ಹಾಗೂ ಹೋರಾಟವನ್ನು ಮೈಗೂಡಿಸಿಕೊಂಡು ಪುರುಷ ಪ್ರಧಾನ ಸಮಾಜದಲ್ಲಿ ರಾಜ್ಯಭಾರ ಮಾಡಿದಂತಹ ಕೆಚ್ಚೆದೆಯ ಮಹಿಳೆ ಕಿತ್ತೂರು ಚನ್ನಮ್ಮ ಎಂದು ಬಣ್ಣಿಸಿದರು.

ಸಾಧನೆ: ದೇಶದಲ್ಲಿ ಪ್ರಸಕ್ತ ಸನ್ನಿವೇಶದಲ್ಲಿ ಮಹಿಳೆಯರು ತಾವು ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ದಬ್ಟಾಳಿಕೆ ಮತ್ತು ದೌರ್ಜನ್ಯಗಳು ನಡೆಯುತ್ತಿದ್ದರೂ ಎಲ್ಲವನ್ನು ಮೆಟ್ಟಿ ನಿಂತು ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮ ಸಾಧನೆ ತೋರುತ್ತಿರುವುದು ಹೆಮ್ಮೆಯ ವಿಷಯ. ಸರ್ಕಾರಗಳು ಸ್ತ್ರೀ-ಪುರುಷರು ಸಮಾನರು ಎಂಬ ಕಾನೂನುಗಳನ್ನು ಜಾರಿಗೆ ತಂದು ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಜೀವನ ನಡೆಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ರಾಜ್ಯ ರಕ್ಷಣೆಗಾಗಿ ಬ್ರಿಟಿಷರ ವಿರುದ್ಧ ಸಿಡಿದು ರಣರಂಗದಲ್ಲಿ ಕತ್ತಿ ಹಿಡಿದು ಹೋರಾಟ ಮಾಡಿದ ದಕ್ಷ ಆಡಳಿತಗಾರಳಾಗಿದ್ದ ಚನ್ನಮ್ಮಳ ಧೈರ್ಯ, ಸಾಧನೆಗಳು ಮತ್ತು ಆಡಳಿತ ವಿಧಾನ ಎಲ್ಲರಿಗೂ ಆದರ್ಶಪ್ರಾಯವಾಗಿದ್ದು, ಅವರ ತತ್ವಾದರ್ಶಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಜಯಂತಿ ಆಚರಣೆಗೆ ಅರ್ಥ ಬರಲಿದೆ ಎಂದು ತಿಳಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ರಾಜಶೇಖರ್‌ ಮಾತನಾಡಿ, ಅ.23ರಂದು ಬ್ರಿಟಿಷರ ಸೈನ್ಯದ ವಿರುದ್ಧª ಪ್ರಥಮವಾಗಿ ಹೋರಾಟ ಮಾಡಿ ಜಯಗಳಿಸಿದ ಚನ್ನಮ್ಮಳ ವಿಜಯೋತ್ಸವವನ್ನೇ ಸರ್ಕಾರ ಜಯಂತಿಯಾಗಿ ಆಚರಿಸುತ್ತಿದೆ. ದಿಟ್ಟ ಹೋರಾಟಗಾರ್ತಿಯಾದ ಕಿತ್ತೂರು ರಾಣಿ ರಾಜ್ಯದ ಉಳಿಗಾಗಿ ವ್ಯವಸ್ಥಿತ ಸುಸಜ್ಜಿತ ಕೋಟೆಯನ್ನು ಹೊಂದಿ ಪತಿಯನ್ನು ಕಳೆದುಕೊಂಡರೂ ಎದೆಗುಂದದೆ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಹೋರಾಟ ಮಾಡಿದ ವೀರ ಮಹಿಳೆ ಎಂದು ತಿಳಿಸಿದರು.

Advertisement

ಚನ್ನಮ್ಮಳಂತಹ ವೀರ ಮಹಿಳೆಯರಿಂದ ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನಮಾನ ಮತ್ತು ಗೌರವ ದೊರಕಲು ಸಾಧ್ಯವಾಯಿತು. ಇಂತಹ ಗಣ್ಯ ಮಹನೀಯರ ಜಯಂತಿಗಳ ಆಚರಣೆಯಿಂದ ಅವರ ಇತಿಹಾಸ, ಮಹತ್ವಗಳನ್ನು ತಿಳಿಸಿದರೆ ಜನ ಸಾಮಾನ್ಯರ ಮನಸ್ಸಿನ ಮೇಲೆ ಪ್ರಭಾವ ಬೀರಿ ಉತ್ತಮ ಸಮಾಜ ನಿರ್ಮಾಣವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಪ್ರಧಾನ ಭಾಷಣ ಮಾಡಿದ‌ ರಾಜಶೇಖರ್‌ ಅವರನ್ನು ಸನ್ಮಾನಿಸಲಾಯಿತು. ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಂ.ಎಸ್‌.ಯದುಗಿರೀಶ್‌, ಭೂದಾಖಲೆಗಳ ಸಹಾಯಕ ನಿರ್ದೇಶಕ ಮಂಜುನಾಥ್‌, ಕಾರ್ಯನಿರ್ವಾಕ ಶಿರಸ್ತೇದಾರ್‌ ಷಣ್ಮುಖ ಮತ್ತಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next