ಬೆಂಗಳೂರು: ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಸುವರ್ಣ ಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಅಡಿಗಲ್ಲು ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ಎರಡೂ ಪ್ರತಿಮೆ ಸ್ಥಾಪನೆಗೆ ಆದೇಶ ಹೊರಡಿಸಲಾಗಿದೆ ಎಂದರು.
ಗಡಿಯಲ್ಲಿ ಉದ್ವಿಗ್ನ ವಾತಾವರಣ ಸಂಬಂಧ ಮಹಾರಾಷ್ಟ್ರದ ಗೃಹ ಇಲಾಖೆ ಕಾರ್ಯದರ್ಶಿಗಳೊಂದಿಗೆ ಮಾತುಕತೆ ನಡೆಸಲು ಸೂಚಿಸಿದೆ. ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಎರಡೂ ರಾಜ್ಯಗಳ ಸಾಮರಸ್ಯ ಹದಗೆಡುವುದು ಬೇಡ. ಕರ್ನಾಟಕ ಬಸ್ಸು, ಜನರು ಹಾಗೂ ಆಸ್ತಿಗೆ ಸಂಪೂರ್ಣವಾದ ರಕ್ಷಣೆ ನೀಡಬೇಕು ಎಂದು ಹೇಳಿದರು.
ರೈತರು ಏಕರೂಪ ನಾಗರಿಕ ಸಂಹಿತೆ ಬಿಜೆಪಿ ಪ್ರಣಾಳಿಕೆಯಲ್ಲಿದ್ದ ಪ್ರಮುಖ ಅಂಶ. ಸಮಿತಿಗಳನ್ನು ವಿವಿಧ ರಾಜ್ಯಗಳಲ್ಲಿ ರಚಿಸಲಾಗಿದೆ. ಏಕರೂಪ ನಾಗರಿಕ ಸಂಹಿತೆ ಇದ್ದರೆ ಉತ್ತಮ ಎಂದು ಬಿಜೆಪಿ ನಂಬಿದೆ ಎಂದು ತಿಳಿಸಿದರು.
ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ವರದಿಯನ್ನು ಪಡೆಯಲು ಪಂಚಮಸಾಲಿ ಸ್ವಾಮೀಜಿಗಳು ಗಡುವು ನೀಡಿದ್ದು, ಅದು ಒಂದು ಶಾಸನಬದ್ಧ ಸಂಸ್ಥೆ. ಆದಷ್ಟು ಬೇಗ ವರದಿ ನೀಡಲು ಹೇಳಿದ್ದು, ಆದಷ್ಟು ಬೇಗ ಕೊಟ್ಟರೆ ನಾವು ಕೂಡ ನಿರ್ಣಯ ಮಾಡುತ್ತೇವೆಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.