Advertisement

ಕಿತ್ತೂರು ಉತ್ಸವ ಬೆಳ್ಳಿ ಹಬ್ಬ ಸಂಭ್ರಮ: ವೀರಜ್ಯೋತಿಗೆ ಸ್ವಾಗತ, ಉತ್ಸವಕ್ಕೆ ಅದ್ಧೂರಿ ಚಾಲನೆ

11:40 AM Oct 23, 2021 | Team Udayavani |

ಬೆಳಗಾವಿ: ಕಿತ್ತೂರು ವಿಜಯೋತ್ಸವ ಸವಿನೆನಪಿಗಾಗಿ ಜಿಲ್ಲೆಯಾದ್ಯಂತ ಸಂಚರಿಸಿದ ವೀರಜ್ಯೋತಿಯನ್ನು ಶನಿವಾರ ಸಂಭ್ರಮದಿಂದ ಬರಮಾಡಿಕೊಂಡು ಧ್ವಜಾರೋಹಣ ನೆರವೇರಿಸುವ ಮೂಲಕ ಕಿತ್ತೂರು ಉತ್ಸವಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು.

Advertisement

ಪ್ರತಿವರ್ಷ ನಡೆಯುವ ಉತ್ಸವದ ಸಂಪ್ರದಾಯದಂತೆ ಚನ್ನಮ್ಮನ ಸಮಾಧಿ ಸ್ಥಳ ಬೈಲಹೊಂಗಲದಿಂದ ಹೊರಟು ಜಿಲ್ಲೆಯಾದ್ಯಂತ ಸಂಚರಿಸಿದ ವೀರ ಜ್ಯೋತಿಯನ್ನು ಕಿತ್ತೂರು ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಸ್ವಾಗತಿಸಲಾಯಿತು.

ಸಂಸದೆ ಮಂಗಲಾ ಅಂಗಡಿ ಅವರು ಚನ್ನಮ್ಮನ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಉತ್ಸವದ ಧ್ವಜಾರೋಹಣ ನೆರವೇರಿಸಿ ಜ್ಯೋತಿಯನ್ನು ಬರಮಾಡಿಕೊಂಡರು.

ಇದನ್ನೂ ಓದಿ:ತಾಂಬಾದಲ್ಲಿ ವಿಜಯೇಂದ್ರ ರೋಡ್‌ ಶೋ: ಭರ್ಜರಿ ಮತಬೇಟೆ

Advertisement

ಚನ್ನಮ್ಮ ಕಿತ್ತೂರಿನ ರಾಜಗುರು ಸಂಸ್ಥಾನ ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಸಕರಾದ ಮಹಾಂತೇಶ ದೊಡ್ಡಗೌಡರ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪಂಚಾಯತ ಸಿಇಒ ದರ್ಶನ್ ಎಚ್.ವಿ., ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಶಿಧರ ಬಗಲಿ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next