Advertisement

ಕಸ್ತೂರಿರಂಗನ್‌ ವರದಿ ವಿರೋಧಿ ನಿರ್ಣಯ

02:07 PM Apr 14, 2017 | Team Udayavani |

ಸೋಮವಾರಪೇಟೆ: ಬೇಳೂರು ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಅಧ್ಯಕ್ಷೆ ಭಾಗ್ಯ ಮಂಜುನಾಥ್‌ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಗ್ರಾಮ ಸಭೆಯಲ್ಲಿ ಕಸ್ತೂರಿ ರಂಗನ್‌ ವರದಿ ಜಾರಿ ವಿರೋಧಿಸಿ ನಿರ್ಣಯ ಕೈಗೊಳ್ಳಲಾಯಿತು. 

Advertisement

ಶಾಸಕ ರಂಜನ್‌ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು ಅಂತಿಮವಾಗಿ ವರದಿಯನ್ನು ವಿರೋಧಿಸಿ ನಿರ್ಣಯ ಅಂಗೀಕರಿಸಲಾಯಿತು. 

ಬೇಳೂರಿನ ಬಜೆಗುಂಡಿ ಗ್ರಾಮದಲ್ಲಿ ಸಾವಿರಕ್ಕೂ ಅಧಿಕ ಕುಟುಂಬಗಳು ನೆಲೆಸಿದ್ದು ಅಗತ್ಯ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದೇವೆ ಎಂದು ಸಾರ್ವಜನಿಕರು ಸಭೆಯಲ್ಲಿ ಅಳಲು ತೋಡಿಕೊಂಡರು.

ವಿಕಾಸ ಗ್ರಾಮ ಯೋಜನೆಯಡಿ ಬಜೆಗುಂಡಿ ಗ್ರಾಮಕ್ಕೆ 1 ಕೋಟಿ ಅನುದಾನ ಒದಗಿಸಲಾಗುವದು. ಈ ಅನುದಾನದಲ್ಲಿ ಗ್ರಾಮಕ್ಕೆ ಮೂಲ ಸೌಕರ್ಯಗಳನ್ನು ಒದಗಿಸ ಲಾಗುವುದು ಎಂದರು.

ಸಾರ್ವಜನಿಕರಿಗೆ ಸಕಾಲದಲ್ಲಿ ಚುನಾವಣಾ ಗುರುತಿನ ಚೀಟಿ, ಆಧಾರ್‌ ಕಾರ್ಡ್‌, ಪಡಿತರ ಚೀಟಿ ವಿತರಿಸಬೇಕು. ಕೆಲ ಅಂಗನವಾಡಿ ಕಾರ್ಯಕರ್ತರು ಚುನಾವಣೆ ಸಂದರ್ಭ ಒಂದು ರಾಜಕೀಯ ಪಕ್ಷದ ಪರ ಪ್ರಚಾರ ನಡೆಸಿ ಮತದಾರರ ಗುರುತಿನ ಚೀಟಿ ವಿತರಿಸುವ ಬಗ್ಗೆ ದೂರುಗಳು ಬರುತ್ತಿದ್ದು, ಇದು ಮುಂದುವರಿದರೆ ಕ್ರಮ ಜರುಗಿಸಲಾಗುವದು ಎಂದು ಸಭೆಯಲ್ಲಿ ಶಾಸಕರು ಎಚ್ಚರಿಕೆ ನೀಡಿದರು.

Advertisement

ಬೇಳೂರಿನಲ್ಲಿ ಕಂಪೆನಿಗಳು ಒತ್ತುವರಿ ಮಾಡಿಕೊಂಡಿರುವ ಪೈಸಾರಿ ಜಾಗ ತೆರವುಗೊಳಿಸಿ, ನಿರ್ವಸತಿಗರಿಗೆ ವಸತಿ ನೀಡಲು ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖಾಧಿಕಾರಿಗಳಿಗೆ ಸೂಚಿಸಿದರು.ಇದಕ್ಕೂ ಮುನ್ನ ಶಾಸಕರು ರೂ. 10 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಿರುವ ಹಿಂದೂ ರುದ್ರಭೂಮಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. 12.50 ಲಕ್ಷ ವೆಚ್ಚದ ನೂತನ ಕಾಂಕ್ರೀಟ್‌ ರಸ್ತೆಗಳನ್ನು ಉದ್ಘಾಟಿಸಿದರು.

ಸಭೆಯಲ್ಲಿ ಜಿ.ಪಂ. ಸದಸ್ಯೆ ಪೂರ್ಣಿಮಾ ಗೋಪಾಲ್‌, ತಾ.ಪಂ. ಸದಸ್ಯ ಬಿ.ಬಿ. ಸತೀಶ್‌, ಜಿ.ಪಂ. ಮಾಜೀ ಅಧ್ಯಕ್ಷ ಬಿ. ಶಿವಪ್ಪ, ಗ್ರಾಮ ಪಂಚಾಯಿತಿ ಸದಸ್ಯರುಗಳು, ಅಭಿವೃದ್ಧಿ ಅಧಿಕಾರಿ ಚನ್ನಕೇಶವ ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next