Advertisement

10 ದಿನದಲ್ಲಿ ಕಲ್ಯಾಣ ಕರ್ನಾಟಕ ಮಂಡಳಿ: ಬಸವರಾಜ ಬೊಮ್ಮಾಯಿ

03:47 PM Sep 24, 2021 | Shreeram Nayak |

ವಿಧಾನಸಭೆ: ಮುಂದಿನ 10 ದಿನದಲ್ಲಿ ಕಲ್ಯಾಣ ಕರ್ನಾಟಕ ಮಂಡಳಿ ರಚನೆ ಮಾಡಿ, ಕಾಯಂ ಕಾರ್ಯದರ್ಶಿ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಗೆ ಉತ್ತರಿಸಿ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪ್ರಸ್ತುತ ವರ್ಷದಲ್ಲಿ 1,500 ಕೋಟಿ ನೀಡಲಾಗುವುದು.

ಕಳೆದ ವರ್ಷದ ಬಾಕಿ 500 ಕೋಟಿ ಇದೆ. ಒಟ್ಟು ಎರಡು ಸಾವಿರ ರೂ. ಹಣ ಖರ್ಚು ಮಾಡಿದರೆ, ಹೆಚ್ಚುವರಿಯಾಗಿ 1500 ಕೋಟಿ ಹಣ ನೀಡಲಾಗುವುದು ಎಂದು ಹೇಳಿದರು.

ಕೋವಿಡ್‌ ಕಾರಣದಿಂದ ನೇಮಕಾತಿಗೆ ಇರುವ ನಿರ್ಬಂಧ ತೆರವುಗೊಳಿಸಿ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು. ತಕ್ಷಣ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ, ಅಗತ್ಯ ಹುದ್ದೆಗಳ ಸೃಷ್ಠಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:ದಾಂಪತ್ಯ ಬಿರುಕು ಸುದ್ದಿಯಿಂದ ‌ನೋವಾಗಿದೆ : ನಟ ನಾಗಚೈತನ್ಯ

Advertisement

ಬೆಂಗಳೂರಿನಲ್ಲಿರುವ 371ಜೆ ಕೇಂದ್ರವನ್ನು ಕಲಬುರ್ಗಿಗೆ ಸ್ಥಳಾಂತರ ಮಾಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಂದು ಜವಳಿ ಪಾರ್ಕ್‌, ಐಟಿ ಪಾರ್ಕ್‌ ಬಂದಿದೆ. ಆದಷ್ಟು ಬೇಗ ಈ ಭಾಗದಲ್ಲಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳ ಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲು ಆ ಭಾಗದ ಅಧಿಕಾರಿಗಳ ಸಭೆ ಕರೆಯಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಆತ್ಮವಿಶ್ವಾಸ ಬರುವಂತೆ ನೋಡಿಕೊಳ್ಳುವುದಾಗಿ ಹೇಳಿದರು.

ಅವ್ಯವಹಾರ ತನಿಖೆ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಚನೆ ಮಾಡಿರುವ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘ ನಿಯಮ ಮೀರಿ ಹಣ ವ್ಯ¿å ಮಾಡಿದ್ದರೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು. ಈ ಬಗ್ಗೆ ಚಿತ್ತಾಪುರ ಶಾಸಕ ಪ್ರಿಯಾಂಕ್‌ ಖರ್ಗೆ ಚರ್ಚೆ ವೇಳೆ ಸದನದ ಗಮನಸೆಳೆದಿದ್ದರು.

ಸರ್ಕಾರದ ಪರವಾಗಿ ಉತ್ತರ ನೀಡಿ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದಿಂದ ಪಾರದರ್ಶಕ ಕೆಲಸವಾಗು ತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆ ಭಾಗದ ಎಲ್ಲ ಶಾಸಕರೊಂದಿಗೆ ಸಭೆ ನಡೆಸಿ ಯೋಜ ನೆಗಳನ್ನು ಅನುಷ್ಠಾನಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next