Advertisement
ತಂಡದ ಸ್ಟಾರ್ ಆರಂಭಕಾರ, ಇನ್‌ಫಾರ್ಮ್ ಬ್ಯಾಟ್ಸ್‌ಮನ್ ಕೆ.ಎಲ್. ರಾಹುಲ್ ಎಡ ತೊಡೆಯ ಸ್ನಾಯು ಸೆಳೆತಕ್ಕೆ ಒಳಗಾದ ಕಾರಣ ಟೆಸ್ಟ್ ಸರಣಿಯಿಂದಲೇ ಹೊರ ಬಿದ್ದಿದ್ದಾರೆ. ಇವರ ಬದಲು ಸೂರ್ಯಕುಮಾರ್ ಯಾದವ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
Related Articles
ರಾಹುಲ್ ಅನುಪಸ್ಥಿತಿಯಲ್ಲಿ ಶುಭಮನ್ ಗಿಲ್ ಮತ್ತು ಮಾಯಾಂಕ್ ಅಗರ್ವಾಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಸೂರ್ಯಕುಮಾರ್ ಯಾದವ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾದರೂ ಆಡುವ ಬಳಗದಲ್ಲಿ ಸ್ಥಾನ ಪಡೆದಿರಲಿಲ್ಲ. ನ್ಯೂಜಿಲ್ಯಾಂಡ್ ವಿರುದ್ಧ ಕೊಹ್ಲಿ, ರೋಹಿತ್, ಪಂತ್, ರಾಹುಲ್ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್‌ಗೆ ಆಡುವ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.
Advertisement