Advertisement

ಕಿವೀಸ್‌ ಟೆಸ್ಟ್‌ ಸರಣಿಯಿಂದ ಕೆ. ಎಲ್‌. ರಾಹುಲ್‌ ಔಟ್‌

11:05 PM Nov 23, 2021 | Team Udayavani |

ಕಾನ್ಪುರ: ಕಾನ್ಪುರದ ಗ್ರೀನ್‌ ಪಾರ್ಕ್‌ನಲ್ಲಿ ಗುರುವಾರ ಆರಂಭಗೊಳ್ಳಲಿರುವ ನ್ಯೂಜಿಲ್ಯಾಂಡ್‌ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯಕ್ಕೂ ಮುನ್ನ ಟೀಮ್‌ ಇಂಡಿಯಾಕ್ಕೆ ದೊಡ್ಡದೊಂದು ಆಘಾತ ಎದುರಾಗಿದೆ.

Advertisement

ತಂಡದ ಸ್ಟಾರ್‌ ಆರಂಭಕಾರ, ಇನ್‌ಫಾರ್ಮ್ ಬ್ಯಾಟ್ಸ್‌ಮನ್‌ ಕೆ.ಎಲ್‌. ರಾಹುಲ್‌ ಎಡ ತೊಡೆಯ ಸ್ನಾಯು ಸೆಳೆತಕ್ಕೆ ಒಳಗಾದ ಕಾರಣ ಟೆಸ್ಟ್‌ ಸರಣಿಯಿಂದಲೇ ಹೊರ ಬಿದ್ದಿದ್ದಾರೆ. ಇವರ ಬದಲು ಸೂರ್ಯಕುಮಾರ್‌ ಯಾದವ್‌ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

“ಗ್ರೀನ್‌ ಪಾರ್ಕ್‌ ಸ್ಟೇಡಿಯಂ’ನಲ್ಲಿ ಮಂಗಳವಾರ ನಡೆದ ಅಭ್ಯಾಸದ ವೇಳೆ ಬಹುತೇಕ ಎಲ್ಲ ಆಟಗಾರರು ಭಾಗವಹಿಸಿದ್ದರು. ಆದರೆ ಕೆ.ಎಲ್‌. ರಾಹುಲ್‌ ಮಾತ್ರ ಕಂಡು ಬಂದಿರಲಿಲ್ಲ. ಅವರಿನ್ನು ಬೆಂಗಳೂರಿನ ಎನ್‌ಸಿಎಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡು ಬಳಿಕ ದಕ್ಷಿಣ ಆಫ್ರಿಕಾ ಸರಣಿಗೆ ಸಿದ್ಧರಾಗಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಇದನ್ನೂ ಓದಿ:ಡಬ್ಲ್ಯುಬಿಬಿಎಲ್‌ ಟೂರ್ನಿಯ ತಂಡ: ಹರ್ಮನ್‌ಪ್ರೀತ್‌ಗೆ ಸ್ಥಾನ

ಅಗರ್ವಾಲ್‌-ಗಿಲ್‌ ಓಪನಿಂಗ್‌
ರಾಹುಲ್‌ ಅನುಪಸ್ಥಿತಿಯಲ್ಲಿ ಶುಭಮನ್‌ ಗಿಲ್‌ ಮತ್ತು ಮಾಯಾಂಕ್‌ ಅಗರ್ವಾಲ್‌ ಇನ್ನಿಂಗ್ಸ್‌ ಆರಂಭಿಸಲಿದ್ದಾರೆ. ಸೂರ್ಯಕುಮಾರ್‌ ಯಾದವ್‌ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಗೆ ಆಯ್ಕೆಯಾದರೂ ಆಡುವ ಬಳಗದಲ್ಲಿ ಸ್ಥಾನ ಪಡೆದಿರಲಿಲ್ಲ. ನ್ಯೂಜಿಲ್ಯಾಂಡ್‌ ವಿರುದ್ಧ ಕೊಹ್ಲಿ, ರೋಹಿತ್‌, ಪಂತ್‌, ರಾಹುಲ್‌ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್‌ಗೆ ಆಡುವ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next