Advertisement

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನದ ಸರಣಿಗೆ ಕೆ.ಎಲ್.ರಾಹುಲ್ ನಾಯಕತ್ವ?

09:50 AM Dec 28, 2021 | Team Udayavani |

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಉಪನಾಯಕನಾಗಿ ನಿಯೋಜನೆಗೊಂಡಿರುವ ಕರ್ನಾಟಕದ ಆಟಗಾರ ಕೆ.ಎಲ್.ರಾಹುಲ್ ಅವರು ಮುಂದಿನ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ನೂತನ ಏಕದಿನ ತಂಡದ ನಾಯಕನಾಗಿ ನೇಮಕವಾಗಿರುವ ರೋಹಿತ್ ಶರ್ಮಾ ಅವರು ಈ ತಿಂಗಳ ಆರಂಭದಲ್ಲಿ ಗಾಯಗೊಂಡಿದ್ದರು. ಹೀಗಾಗಿ ಹರಿಣಗಳ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ ಸಿಎ) ದಲ್ಲಿರುವ ರೋಹಿತ್ ಫಿಟ್ನೆಸ್ ಟೆಸ್ಟ್ ಪಾಸಾಗಬೇಕಿದೆ.

ಒಂದು ವೇಳೆ ರೋಹಿತ್ ಶರ್ಮಾ ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲರಾದರೆ ಅವರು ಏಕದಿನ ಸರಣಿಗೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳುವುದಿಲ್ಲ. ಹೀಗಾಗಿ ಅವರ ಬದಲಿಗೆ ಕೆ.ಎಲ್.ರಾಹುಲ್ ಅವರು ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಕೊಹ್ಲಿಯ ಉದ್ವೇಗವೇ ರೋಹಿತ್‌ ಪಟ್ಟದ ಹಿಂದಿನ ರಹಸ್ಯ

ಮೂರು ಪಂದ್ಯಗಳ ಏಕದಿನ ಸರಣಿ ಜನವರಿ 19ರಿಂದ ಆರಂಭವಾಗಲಿದೆ. ಡಿ.30ರಂದು ಏಕದಿನ ತಂಡ ಪ್ರಕಟವಾಗುವ ಸಾಧ್ಯತೆಯಿದೆ. ಇದಕ್ಕೂ ಮೊದಲು ರೋಹಿತ್ ಫಿಟ್ ಆಗಬೇಕಿದೆ.

Advertisement

ಶಿಖರ್ ಧವನ್ ಕಮ್ ಬ್ಯಾಕ್: ಇದೇ ವೇಳೆ ಹಿರಿಯ ಆರಂಭಿಕ ಆಟಗಾರ ಶಿಖರ್ ಧವನ್ ಅವರು ಏಕದಿನ ತಂಡಕ್ಕೆ ಮರಳುವ ಸಾಧ್ಯತೆಯಿದೆ ಎನ್ನಲಾಗಿದೆ. ರೋಹಿತ್ ಗೈರಾದರೆ ರಾಹುಲ್ ಜೊತೆ ಧವನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಇದೇ ವೇಳೆ ಇತ್ತೀಚೆಗಷ್ಟೇ ಅಂತ್ಯವಾದ ವಿಜಯ್ ಹಜಾರೆ ಕೂಟದಲ್ಲಿ ಗಮನಾರ್ಹ ಸಾಧನೆ ಮಾಡಿದ ಋತುರಾಜ್ ಗಾಯಕ್ವಾಡ್ ಮತ್ತು ವೆಂಕಟೇಶ್ ಅಯ್ಯರ್ ಕೂಡಾ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.

ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮತ್ತು ತಮಿಳುನಾಡು ಆಲ್ ರೌಂಡರ್ ಶಾರುಖ್ ಖಾನ್ ಬಗ್ಗೆಯೂ ಚರ್ಚೆ ನಡೆದಿದೆ. ಅಶ್ವಿನ್ ಅವರು ಏಕದಿನ ತಂಡಕ್ಕೆ ಕಮ್ ಬ್ಯಾಕ್ ಮಾಡುವುದು ಬಹುತೇಕ ಖಚಿತವಾಗಿದ್ದು, ಶಾರುಖ್ ಖಾನ್ ಬಗ್ಗೆ ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ಸ್ಪೋರ್ಟ್ಸ್ ತಕ್ ವರದಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next