ಮುಂಬೈ: ಟೀಂ ಇಂಡಿಯಾ ಬ್ಯಾಟರ್ ಕೆಎಲ್ ರಾಹುಲ್ ಅವರು ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಕೌಟುಂಬಿಕ ಕಾರಣದಿಂದ ರಾಹುಲ್ ಸರಣಿಯಲ್ಲಿ ಭಾಗವಹಿಸತ್ತಿಲ್ಲ ಎಂದು ಬಿಸಿಸಿಐ ಹೇಳಿದೆ. ಹೀಗಾಗಿ ಈ ಸಮಯದಲ್ಲಿ ರಾಹುಲ್ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ಅಂದಾಜಿಸಲಾಗಿತ್ತು.
ಮಂಗಳೂರು ಮೂಲದ ರಾಹುಲ್ ಮತ್ತು ಬಾಲಿವುಡ್ ನಟ ಸುನಿಲ್ ಶೆಟ್ಟಿ ಪುತ್ರಿ, ನಟಿ ಆಥಿಯಾ ಶೆಟ್ಟಿ ಪ್ರೀತಿ ಮಾಡುತ್ತಿರುವ ವಿಚಾರ ಎಲ್ಲರಿಗೂ ತಿಳಿದಿದೆ. ಇದೀಗ ರಾಹುಲ್- ಆಥಿಯಾ ವಿವಾಹವು ಜನವರಿ 23 ರಂದು ನಡೆಯಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್ ಡಿಟಿವಿ ವರದಿ ಮಾಡಿದೆ.
ಇದನ್ನೂ ಓದಿ:ನಮ್ಮ ಶಿವಸೇನೆಯಲ್ಲಿ ಆಮೂಲಾಗ್ರ ಬದಲಾವಣೆಯಾಗಿದೆ: ಆದಿತ್ಯ ಠಾಕ್ರೆ
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಎಂಎಸ್ ಧೋನಿ ಅವರು ತಮ್ಮ ಕುಟುಂಬದೊಂದಿಗೆ ವಿವಾಹ ಸಮಾರಂಭಕ್ಕೆ ಹಾಜರಾಗುವ ನಿರೀಕ್ಷೆಯಿದೆ.
Related Articles
ಇತ್ತೀಚಿನ ದಿನಗಳಲ್ಲಿ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದ ಕೆಎಲ್ ರಾಹುಲ್ ಲಂಕಾ ವಿರುದ್ಧದ ಕೋಲ್ಕತ್ತಾ ಏಕದಿನ ಪಂದ್ಯದಲ್ಲಿ ಅಜೇಯ ಅರ್ಧಶತಕ ಸಿಡಿಸಿ ಮಿಂಚಿದ್ದರು.