Advertisement

ರಾಹುಲ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

10:03 PM Jun 30, 2022 | Team Udayavani |

ಹೊಸದಿಲ್ಲಿ: ಕ್ರಿಕೆಟಿಗ ಕೆ.ಎಲ್‌. ರಾಹುಲ್‌ ಅವರಿಗೆ ಜರ್ಮನಿಯಲ್ಲಿ ನಡೆಸಲಾದ “ನ್ಪೋರ್ಟ್‌ ಹರ್ನಿಯಾ’ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.

Advertisement

ಈ ಕುರಿತು ಸ್ವತಃ ರಾಹುಲ್‌ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಫೋಟೊ ಒಂದನ್ನು ಹಂಚಿಕೊಂಡಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ, ನಾನು ಗುಣಮುಖನಾಗುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. “ಕಳೆದ ಒಂದೆರಡು ವಾರಗಳು ಬಹಳ ಕಠಿನವಾಗಿದ್ದವು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಚೇತರಿಸಿಕೊಳ್ಳುತ್ತಿದ್ದೇನೆ. ನಿಮ್ಮ ಹಾರೈಕೆ ಮತ್ತು ಪ್ರಾರ್ಥನೆಗೆ ಧನ್ಯವಾದಗಳು. ಶೀಘ್ರದಲ್ಲೇ ಭೇಟಿಯಾಗೋಣ’ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next