Advertisement

ಇಂಗ್ಲೆಂಡ್ ಸರಣಿಯಿಂದ ಹೊರಬಿದ್ದ ರಾಹುಲ್ ; ಜರ್ಮನಿಗೆ ತೆರಳಲಿರುವ ಕೆ.ಎಲ್

03:15 PM Jun 16, 2022 | Team Udayavani |

ಮುಂಬೈ: ಟೀಂ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಅವರನ್ನು ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ನಿರ್ಧರಿಸಿದ್ದು, ರಾಹುಲ್ ಜರ್ಮನಿಯಲ್ಲಿ ಚಿಕಿತ್ಸೆ ಪಡೆಯುವ ಸಾಧ್ಯತೆಯಿದೆ.

Advertisement

30 ವರ್ಷ ವಯಸ್ಸಿನ ರಾಹುಲ್ ತೊಡೆಸಂದು ಗಾಯದಿಂದ ಬಳಲುತ್ತಿದ್ದಾರೆ. ಸದ್ಯ ಪ್ರಕಟವಾಗಿರುವ ಐರ್ಲೆಂಡ್ ಪ್ರವಾಸಕ್ಕೂ ಆಯ್ಕೆಯಾಗದ ರಾಹುಲ್ ಇಂಗ್ಲೆಂಡ್ ಪ್ರವಾಸವನ್ನು ಕಳೆದುಕೊಳ್ಳಲಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಹುಲ್ ಫಿಟ್ ನೆಸ್ ಬಗ್ಗೆ ಬಿಸಿಸಿಐ ಕೆಲಸ ಮಾಡುತ್ತಿದ್ದು, ಅವರು ಶೀಘ್ರದಲ್ಲೇ ಜರ್ಮನಿಗೆ ತೆರಳಲಿದ್ದಾರೆ ಎಂದು ಕ್ರಿಕ್ ಬಜ್ ವರದಿ ಮಾಡಿದೆ.

ಇದನ್ನೂ ಓದಿ:ಹಾರ್ದಿಕ್ ಪಾಂಡ್ಯ ಅತ್ಯಂತ ಪ್ರಬುದ್ಧ ನಾಯಕ: ಆಕಾಶ್ ಚೋಪ್ರಾ

ಭಾರತ ತಂಡ ಜುಲೈ 1ರಿಂದ ಒಂದು ಟೆಸ್ಟ್ ಪಂದ್ಯವಾಡಲಿದ್ದು, ಬಳಿಕ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನಾಡಲಿದೆ. ಈ ಸರಣಿಗೆ ತಂಡ ಈಗಾಗಲೇ ಪ್ರಕಟವಾಗಿದ್ದು, ರಾಹುಲ್ ರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ. ಆದರೆ ರಾಹುಲ್ ಅಲಭ್ಯತೆಯ ಕಾರಣ ಬೇರೆ ಉಪನಾಯಕನ ಆಯ್ಕೆ ಮಾಡಬೇಕಾಗಿದೆ.

Advertisement

ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಸೇರಿದಂತೆ ಪ್ರಮಖ ಆಟಗಾರರ ಮೊದಲ ತಂಡ ಈಗಾಗಲೇ ಇಂಗ್ಲೆಂಡ್ ತಲುಪಿದೆ. ಟೆಸ್ಟ್ ಪಂದ್ಯದಲ್ಲಿ ರಾಹುಲ್ ಬದಲಿಗೆ ಶುಬ್ಮನ್ ಗಿಲ್ ಅವರು ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next