Advertisement

ಸೂರ್ಯ ಬ್ಯಾಟಿಂಗ್ ಅಬ್ಬರ: ತುಳುನಾಡ ಅಳಿಯನಿಗೆ ಕೆಎಲ್ ರಾಹುಲ್ ಪ್ರಶಂಸೆ

11:14 AM Jan 08, 2023 | Team Udayavani |

ರಾಜಕೋಟ್: ಪ್ರವಾಸಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಭಾರತದ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರು ಭರ್ಜರಿ ಶತಕ ಬಾರಿಸಿ ಮಿಂಚಿದ್ದಾರೆ. ಸೂರ್ಯ ಶತಕದ ಕಾರಣದಿಂದ ಭಾರತ ತಂಡ ರಾಜಕೋಟ್ ಪಂದ್ಯವನ್ನು ಗೆದ್ದು, ಸರಣಿ ವಶಪಡಿಸಿಕೊಂಡಿದೆ.

Advertisement

ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್ ಕಂಡು ಈ ಸರಣಿಯಲ್ಲಿ ವಿಶ್ರಾಂತಿಯಲ್ಲಿರುವ ಭಾರತದ ಆಟಗಾರ, ಮೂಲತಃ ಮಂಗಳೂರಿನವರಾದ ಕೆ.ಎಲ್.ರಾಹುಲ್ ಅವರು ತುಳುವಿನಲ್ಲಿ ಇನ್ಸ್ಟಾಗ್ರಾಮ್ ಪೋಸ್ಟ್ ಹಾಕಿದ್ದು, ಇದೀಗ ವೈರಲ್ ಆಗಿದೆ.

ಸೂರ್ಯಕುಮಾರ್ ಶತಕದ ಸಂಭ್ರಮಾಚರಣೆ ಮಾಡುವ ಚಿತ್ರವನ್ನು ಹಾಕಿ, ಅದರಲ್ಲಿ ‘ಬಾರೀ ಎಡ್ಡೆ ಗೊಬ್ಬಿಯ’ (ತುಂಬಾ ಉತ್ತಮವಾಗಿ ಆಡಿದೆ) ಎಂದು ತನ್ನ ಇನ್ ಸ್ಟ್ರಾಗ್ರಾಂನಲ್ಲಿ ಸ್ಟೋರಿ ಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸೂರ್ಯಕುಮಾರ್ ಯಾದವ್ ಅವರ ಪತ್ನಿ, ಕರಾವಳಿ ಮೂಲದವರಾದ ದೇವಿಶಾ ಶೆಟ್ಟಿ ಅವರು ‘ಚೂರ್ ತುಳು ಕಲ್ಪಾವೊಡು ಆರೆಗ್ ನನ’ (ಸ್ವಲ್ಪ ತುಳು ಕಲಿಸಬೇಕು ಅವರಿಗೆ ಇನ್ನು) ಎಂದು ಬರೆದು ಕೊಂಡಿದ್ದಾರೆ. ಇದರ ಸ್ಕ್ರೀನ್ ಶಾಟ್ ಇದೀಗ ವೈರಲ್ ಆಗುತ್ತಿದೆ.

ಇದನ್ನೂ ಓದಿ:#Yash19: ಕೋಟಿ ಕೋಟಿ ಬಜೆಟ್‌ ನಲ್ಲಿ ರಾಕಿಭಾಯ್‌ ಮುಂದಿನ ಸಿನಿಮಾ ನಿರ್ಮಾಣ ಮಾಡಲಿದೆ ಕೆವಿಎನ್‌: ನಿರ್ದೇಶಕರು ಯಾರು?

ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ವಿಶ್ವದ ಅಗ್ರ ಶ್ರೇಯಾಂಕಿತ ಟಿ20 ಬ್ಯಾಟರ್ ಸೂರ್ಯಕುಮಾರ್ ಯಾದವ್ ತಮ್ಮ ಬ್ಯಾಟಿಂಗ್ ವೈಭವ ಪ್ರದರ್ಶಿಸಿದರು. 51 ಎಸೆತಗಳಲ್ಲಿ 112 ರನ್ ಗಳಿಸಿದ ಸೂರ್ಯ 7 ಬೌಂಡರಿ ಮತ್ತು 9 ಸಿಕ್ಸರ್ ಬಾರಿಸಿದ್ದರು.

Advertisement

ಭಾರತ ತಂಡವು 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 228 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಲಂಕಾ 16.4 ಓವರ್ ಗಳಲ್ಲಿ 137 ರನ್ ಗೆ ಆಲೌಟಾಯಿತು. 91 ರನ್ ಅಂತರದಿಂದ ಗೆದ್ದ ಭಾರತ ತಂಡ ಸರಣಿಯನ್ನು 2-1 ಅಂತರದಿಂದ ವಶ ಪಡಿಸಿಕೊಂಡಿತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next