Advertisement
ಶನಿವಾರ ಜರಗಿದ ಕಾರ್ಯ ಕ್ರಮದಲ್ಲಿ ಮಾಹೆ ಸಹಕುಲಾಧಿಪತಿ ಪತಿ ಡಾ| ಎಚ್.ಎಸ್. ಬಲ್ಲಾಳ್, ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್ ಮಾತನಾಡಿ, ರೋಗಿಗಳ ಚಿಕಿತ್ಸೆ ಮತ್ತು ಆರೈಕೆಯಲ್ಲಿ ಶುಶ್ರೂಷಾ ಸೇವೆ ಬಹು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಮಣಿಪಾಲದ ಆಸ್ಪತ್ರೆಯ ಆರೋಗ್ಯ ಮತ್ತು ಶುಶ್ರೂಷೆ ಸೇವೆಗಳಲ್ಲಿ ಉತ್ಕೃಷ್ಟತೆಯನ್ನು ಮುಂದುವರಿಸಿದೆ ಎಂದರು. ಆಸ್ಪತ್ರೆ ಮಣಿಪಾಲದ ನರ್ಸಿಂಗ್ ಸೇವೆಗಳ ಮುಖ್ಯಸ್ಥೆ ಡಾ| ಶುಭ ಸೂರಿಯ ಮತ್ತು ನರ್ಸಿಂಗ್ ತಂಡಕ್ಕೆ ಪ್ರಮಾಣಪತ್ರ ಹಸ್ತಾಂತರಿಸಿದರು.